ಶನಿವಾರ, 2 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂರಕ್ಷಿತ ಪ್ರದೇಶವಾಗಿ ‘ಹೆಸರಘಟ್ಟ ಹುಲ್ಲುಗಾವಲು’: ಘೋಷಣೆಗೆ ವಿಶ್ವನಾಥ್‌ ಆಕ್ಷೇಪ

ವನ್ಯಜೀವಿ ಮಂಡಳಿ ನಿಲುವಿಗೆ ವಿಶ್ವನಾಥ್‌ ಬೇಸರ * ಪಟ್ಟಭದ್ರರ ಹಿತಾಸಕ್ತಿ ಶಂಕೆ
Last Updated 4 ಸೆಪ್ಟೆಂಬರ್ 2022, 22:22 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯ ವನ್ಯಜೀವಿ ಮಂಡಳಿಯು ಹೆಸರಘಟ್ಟ ಹುಲ್ಲು ಗಾವಲು ಪ್ರದೇಶವನ್ನು ‘ಸಂರಕ್ಷಿತ ಪ್ರದೇಶ’ವಾಗಿ ಘೋಷಿಸಲು ಪ್ರಯತ್ನಿಸುತ್ತಿದೆ ಎಂದು ಬಿಡಿಎ ಅಧ್ಯಕ್ಷ ಎಸ್.ಆರ್. ವಿಶ್ವನಾಥ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪಟ್ಟಭದ್ರ ಹಿತಾಸಕ್ತಿ ಒತ್ತಡಕ್ಕೆ ಮಣಿದು ಈ ಹಿಂದೆ ತೆಗೆದುಕೊಂಡಿದ್ದ ತೀರ್ಮಾನ ರದ್ದು ಮಾಡಿ ಹುಲ್ಲುಗಾವಲಿಗೆ ಹೊಂದಿಕೊಂಡಂತಿರುವ ಜಾಗವನ್ನು ಸಂರಕ್ಷಿತ ಪ್ರದೇಶ ವನ್ನಾಗಿ ಘೋಷಣೆ ಮಾಡುವ ತರಾತುರಿ ತೋರುತ್ತಿದ್ದಾರೆ ಎಂದು ದೂರಿದ್ದಾರೆ.

ಹೆಸರಘಟ್ಟ, ಶಿವಕೋಟೆ, ಹುರಳಿಚಿಕ್ಕನಹಳ್ಳಿ, ಅರಕೆರೆ ಮತ್ತು ಸೊಣ್ಣೇನಹಳ್ಳಿ ಪಂಚಾಯಿತಿ ವ್ಯಾಪ್ತಿಯ 45ಕ್ಕೂ ಹೆಚ್ಚು ಗ್ರಾಮಗಳ ಜನತೆ ತಲತಲಾಂತರದಿಂದಲೂ ಈ ಪ್ರದೇಶದೊಂದಿಗೆ ಒಡನಾಟ ಇಟ್ಟುಕೊಂಡಿ
ದ್ದಾರೆ. ಈ ಪ್ರದೇಶವನ್ನು ಒತ್ತುವರಿದಾರರ ಕೈಗೆ ಸಿಗದಂತೆ ಕಾಪಾಡಿಕೊಂಡು ಬಂದಿದ್ದಾರೆ. ಆದರೆ, ಇದೀಗ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಈ ಪ್ರದೇಶವನ್ನು ಸಂರಕ್ಷಿತ ಪ್ರದೇಶವನ್ನಾಗಿ ಮಾಡಲು ಮುಂದಾಗಿರುವ ಪ್ರಯತ್ನದ ಹಿಂದೆ ಕಾಣದ ಕೈಗಳು ಕೆಲಸ ಮಾಡುತ್ತಿರುವಂತೆ ಕಾಣುತ್ತಿದೆ ಎಂದು ದೂರಿದ್ದಾರೆ.

ಹೋರಾಟದ ಹೆಸರಿನಲ್ಲಿ ಈ ಕಾನೂನು ಬಾಹಿರ ನಿರ್ಣಯ ತೆಗೆದುಕೊಳ್ಳುವಂತೆ ಮಾಡಲು ಪ್ರಯತ್ನ ಮಾಡುತ್ತಿರುವವರಿಗೆ ಸಂಸದ ತೇಜಸ್ವಿ ಸೂರ್ಯ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

ತೇಜಸ್ವಿ ಸೂರ್ಯ ಅವರು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಪ್ರತಿನಿಧಿ. ಅವರಿಗೆ ಹೆಸರಘಟ್ಟ ಹುಲ್ಲುಗಾವಲು ಮತ್ತು ಅದಕ್ಕೆ ಹೊಂದಿಕೊಂಡಿರುವ 45ಕ್ಕೂ ಹೆಚ್ಚು ಗ್ರಾಮಗಳ ಲಕ್ಷಾಂತರ ಕುಟುಂಬಗಳ ನಾಡಿಮಿಡಿತದ ಬಗ್ಗೆ ಅರಿವಿಲ್ಲದಂತೆ ಕಾಣುತ್ತದೆ. ಅವರು ಸ್ಥಳೀಯ ವಾಸ್ತವಾಂಶ ಅರಿತು ನಿರ್ಧಾರ ಪ್ರಕಟಿಸಬೇಕು. ಯಾರೋ ಟ್ವೀಟ್ ಮಾಡಿದ ಕೂಡಲೇ ಬೆಂಬಲಿಸುವುದು ಸೂಕ್ತವಲ್ಲ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT