ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರತಾಪ್‌ ಸಿಂಹ ಅವರಿಂದ ದೇವನೂರ, ಬರಗೂರರಿಗೆ ಅಗೌರವ: ಖಂಡನೆ

Last Updated 31 ಮೇ 2022, 5:13 IST
ಅಕ್ಷರ ಗಾತ್ರ

ಬೆಂಗಳೂರು: ಪಠ್ಯಪುಸ್ತಕ ಪರಿಷ್ಕರಣೆ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಪ್ರತಾಪ್ ಸಿಂಹ ಅವರು ಸಾಹಿತಿಗಳಾದ ದೇವನೂರ ಮಹಾದೇವ ಮತ್ತು ಬರಗೂರು ರಾಮಚಂದ್ರಪ್ಪನವರನ್ನು ನಿಂದಿಸಿರುವುದು ಖಂಡನೀಯ ಎಂದು ಬೆಂಗಳೂರು ದಕ್ಷಿಣ ಜಿಲ್ಲಾ ದಲಿತ ಹಕ್ಕುಗಳ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

ಹಿಂದೂ ಮೂಲಭೂತವಾದದ ಪುರೋಹಿತಶಾಹಿ ವ್ಯವಸ್ಥೆಯನ್ನು ಬೇರೂರಿಸಲು ಶಿಕ್ಷಣ ಕ್ಷೇತ್ರವನ್ನು ‘ಸಂವಹನಾ’ ಕೇಂದ್ರವನ್ನಾಗಿ ಮಾಡಿಕೊಂಡಿರುವ ಬಿಜೆಪಿ ಸರ್ಕಾರ, ಕೇಂದ್ರ– ರಾಜ್ಯಗಳ ಪಠ್ಯ ಪುಸ್ತಕ ಪರಿಷ್ಕರಣೆ ಚೌಕಟ್ಟಗಳನ್ನು ಪಾಲಿಸಿಲ್ಲ. ಸಂವಿಧಾನದ ಆಶಯಕ್ಕೆ ವಿರುದ್ಧವಾಗಿ ರೋಹಿತ್ ಚಕ್ರತೀರ್ಥರ ಮೂಲಕ ಪಠ್ಯಪುಸ್ತಕ ಪರಿಷ್ಕರಣೆ ಮಾಡುತ್ತಿರುವುದು ಕೋಮುವಾದಿ ಹಿತಾಸಕ್ತಿಯನ್ನು ತೋರಿಸುತ್ತದೆ ಎಂದು ಟೀಕಿಸಿದೆ.

ರೋಹಿತ್ ಚಕ್ರತೀರ್ಥ ಸಮಿತಿ ನಡೆಸಿರುವ ಪಠ್ಯಪುಸ್ತಕ ಮರು ಪರಿಷ್ಕರಣೆಗಳನ್ನು ಹಿಂತೆಗೆದುಕೊಂಡು, ಬರಗೂರು ರಾಮಚಂದ್ರಪ್ಪ ಸಮಿತಿ ಪರಿಷ್ಕರಿಸಿರುವ ಪಠ್ಯಗಳನ್ನು ಅಳವಡಿಸಬೇಕು ಎಂದೂ ಆಗ್ರಹಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT