ಬುಧವಾರ, ಮೇ 18, 2022
25 °C

ಒಡಿಶಾದಿಂದ ಗಾಂಜಾ ತಂದು ಮಾರಾಟ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಒಡಿಶಾದಿಂದ ಗಾಂಜಾ ತಂದು ನಗರದಲ್ಲಿ ಮಾರಾಟ ಮಾಡುತ್ತಿದ್ದ ಆರೋಪದಡಿ ಶ್ಯಾಮಾನಂದ್ ದಿಗಲ್ (34) ಎಂಬಾತನನ್ನು ಶೇಷಾದ್ರಿಪುರ ಪೊಲೀಸರು ಬಂಧಿಸಿದ್ದಾರೆ.

‘ಒಡಿಶಾದ ಶ್ಯಾಮಾನಂದ್, ಮೇ 5ರಂದು ನಗರಕ್ಕೆ ಬಂದಿದ್ದ. ಕುಮಾರಪಾರ್ಕ್‌ ಬಳಿಯ ಬಿಬಿಎಂಪಿ ಆಟದ ಮೈದಾನದಲ್ಲಿ ಗಾಂಜಾ ಮಾರುತ್ತಿದ್ದ. ಕಾರ್ಯಾಚರಣೆ ನಡೆಸಿ ಆತನನ್ನು ಬಂಧಿಸಲಾಗಿದೆ. 20 ಕೆ.ಜಿ ಗಾಂಜಾ ಹಾಗೂ ಮೊಬೈಲ್ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಒಡಿಶಾದಲ್ಲಿ ಬೆಳೆದ ಗಾಂಜಾವನ್ನು ನಗರಕ್ಕೆ ತರುತ್ತಿದ್ದ ಆರೋಪಿ, ಇಲ್ಲಿಯ ಗ್ರಾಹಕರಿಗೆ ಮಾರಿ ಹಣ ಸಂಪಾದಿಸಿಕೊಂಡು ವಾಪಸು ಹೋಗುತ್ತಿದ್ದ. ಈ ಬಾರಿ ನಮಗೆ ಸಿಕ್ಕಿಬಿದ್ದಿದ್ದಾನೆ. ಈತನ ಹಿನ್ನೆಲೆ ಹಾಗೂ ಇತರೆ ಮಾಹಿತಿಯನ್ನು ಕಲೆಹಾಕಲಾಗುತ್ತಿದೆ’ ಎಂದೂ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು