ಬುಧವಾರ, 24 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಜತಿನ್‌ ದಾಸ್‌ಗೆ ‘ನಂಜುಂಡ ರಾವ್ ರಾಷ್ಟ್ರೀಯ ಪ್ರಶಸ್ತಿ’

Published 2 ಜುಲೈ 2024, 15:50 IST
Last Updated 2 ಜುಲೈ 2024, 15:50 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ಚಿತ್ರಕಲಾ ಪರಿಷತ್ತು ನೀಡುವ ‘ಪ್ರೊ.ಎಂ.ಎಸ್. ನಂಜುಂಡ ರಾವ್ ರಾಷ್ಟ್ರೀಯ ಪ್ರಶಸ್ತಿ’ಗೆ ಒಡಿಶಾದ ಕಲಾವಿದ ಜತಿನ್ ದಾಸ್ ಆಯ್ಕೆಯಾಗಿದ್ದಾರೆ. 

ಈ ಪ್ರಶಸ್ತಿಯು ₹1 ಲಕ್ಷ ನಗದು ಹಾಗೂ ಫಲಕವನ್ನು ಒಳಗೊಂಡಿದೆ. ‘ಪದ್ಮಭೂಷಣ ಪ್ರಶಸ್ತಿ’ ಪುರಸ್ಕೃತ ಜತಿನ್ ದಾಸ್ ಅವರು, 71ಕ್ಕೂ ಅಧಿಕ ಏಕವ್ಯಕ್ತಿ ಪ್ರದರ್ಶನ ನೀಡಿದ್ದಾರೆ. ರಾಷ್ಟ್ರೀಯ, ಅಂತರರಾಷ್ಟ್ರೀಯ ಮಟ್ಟದ ಕಲಾ ಪ್ರದರ್ಶನಗಳಲ್ಲಿ ಅವರ ಕಲಾಕೃತಿಗಳು ಪ್ರದರ್ಶನ ಕಂಡಿವೆ. ದೇಶದ ಹಲವು ವಿಶ್ವವಿದ್ಯಾಲಯಗಳಲ್ಲಿ ಸಂದರ್ಶಕ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸಿದ್ದಾರೆ ಎಂದು ಪರಿಷತ್ತಿನ ಅಧ್ಯಕ್ಷ ಬಿ.ಎಲ್. ಶಂಕರ್ ತಿಳಿಸಿದ್ದಾರೆ. 

ಪ್ರಶಸ್ತಿ ಪ್ರದಾನ ಸಮಾರಂಭವು ಇದೇ 5 ರಂದು ಬೆಳಿಗ್ಗೆ 11.30ಕ್ಕೆ ಕುಮಾರಕೃಪಾ ರಸ್ತೆಯಲ್ಲಿ ಇರುವ ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ನಡೆಯಲಿದ್ದು, ಗೃಹ ಸಚಿವ ಜಿ. ಪರಮೇಶ್ವರ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT