ಕೆಲವು ವರ್ಷಗಳಿಂದ ಬೆಂಗಳೂರಿನಲ್ಲಿ ವಾಸವಾಗಿರುವ ಗೋಪಾಲ್, ಗಾಂಧಿನಗರದ ಹೋಟೆಲ್‌ನಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. ಬುಧವಾರ ರಾತ್ರಿ ಪಾಳಿಯಲ್ಲಿ ಕೆಲಸ ಮಾಡಿದ್ದ ಅವರು, ಗುರುವಾರ ಬೆಳಿಗ್ಗೆ 7.45ರ ಸುಮಾರಿಗೆ ಸೈಕಲ್‌ನಲ್ಲಿ ಮತ್ತೊಂದು ಕಂಪನಿಯಲ್ಲಿ ಬೆಳಗ್ಗಿನ ಪಾಳಿ ಕೆಲಸಕ್ಕೆ ತೆರಳುತ್ತಿದ್ದರು. ಚಾಲುಕ್ಯ ವೃತ್ತದ ಬಳಿ ವೇಗವಾಗಿ ಬಂದ ಟಿಪ್ಪರ್, ಸೈಕಲ್‌ಗೆ ಡಿಕ್ಕಿ ಹೊಡೆದಿದೆ. ಕೆಳಕ್ಕೆ ಬಿದ್ದ ಗೋಪಾಲ್ ಮೇಲೆಯೇ ಟಿಪ್ಪರ್‌ನ ಚಕ್ರಗಳು ಹರಿದ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಕುಟುಂಬಸ್ಥರಿಗೆ ಮಾಹಿತಿ ನೀಡಲಾಗಿದೆ ಎಂದು ಸಂಚಾರ ಠಾಣೆ ಪೊಲೀಸರು ತಿಳಿಸಿದರು.