ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂದಿನಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಮೂರು ದಿನ ಒಡಿಶಾ ಉತ್ಸವ

Last Updated 13 ಅಕ್ಟೋಬರ್ 2022, 14:40 IST
ಅಕ್ಷರ ಗಾತ್ರ

ಬೆಂಗಳೂರು: ಒಡಿಯಾ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಅಕ್ಟೋಬರ್ 14ರಿಂದ 16ರ ವರೆಗೆ ರವೀಂದ್ರ ಕಲಾಕ್ಷೇತ್ರದಲ್ಲಿ ‘ಒಡಿಶಾ ಉತ್ಸವ’ವನ್ನು ಹಮ್ಮಿಕೊಳ್ಳಲಾಗಿದೆ.

‘ಈ ಉತ್ಸವವನ್ನು ಒಡಿಶಾ ಸಂಗೀತ ನಾಟಕ ಅಕಾಡೆಮಿ, ಒಡಿಶಾ ಸಾಹಿತ್ಯ ಅಕಾಡೆಮಿ ಮತ್ತು ಒಡಿಶಾ ಲಲಿತ ಕಲಾ ಅಕಾಡೆಮಿ ಸಹೋಗದಲ್ಲಿ ಆಯೋಜಿಸಲಾಗಿದೆ. ಅಕ್ಟೋಬರ್ 14ರಂದು ಬೆಳಿಗ್ಗೆ 10.30ಕ್ಕೆ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಾಗುವುದು. ಇದೇ ಮೊದಲ ಬಾರಿಗೆ ಒಡಿಶಾ ರಾಜ್ಯದ ಹೊರಗಡೆ ಈ ಉತ್ಸವವನ್ನು ಆಯೋಜಿಸಲಾಗಿದೆ’ ಎಂದು ಒಡಿಯಾ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರು ಮತ್ತು ಹೆಚ್ಚುವರಿ ಕಾರ್ಯದರ್ಶಿ ರಂಜನ್‌ ಕುಮಾರ್‌ ದಾಸ್ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಅಕ್ಟೋಬರ್ 14ರಂದು ಸಂಜೆ 6.30ಕ್ಕೆ ಭುವನೇಶ್ವರದ ರೇಡಿಯೊ ಚಾಕೊಲೇಟ್‌ನಿಂದ ‘ಅಹೆ ನೀಲಾ ಸೈಲಾ’ ನಾಟಕ ಪ್ರದರ್ಶನ ಏರ್ಪಡಿಸಲಾಗಿದೆ. 15ರಂದು 6.30ಕ್ಕೆ ಒಡಿಶಿ ಗಾಯನ ಸಂಗೀತಾ ಪಾಂಡ, ರೂಪಕ್ ಪರಿದಾ, ವಿವಿಧ ಒಡಿಶಾ ಕಲಾ ಪ್ರಕಾರಗಳನ್ನು ಪ್ರದರ್ಶಿಸಲಾಗುತ್ತಿದೆ. 16ರಂದು ದಾಸ್‌ ಮತ್ತು ಲೋಕನಾಥ್ ದಾಸ್ ತಂಡದಿಂದ ಚೌ ನೃತ್ಯ, ಸಂಬಲ್‌ಪುರಿ, ಸಿಂಘಾರಿ ನೃತ್ಯ ಪ್ರದರ್ಶಿಸಲಾಗುವುದು. ಈ ಉತ್ಸವದಲ್ಲಿ ಎಲ್ಲರೂ ಮುಕ್ತವಾಗಿ ಭಾಗವಹಿಸಬಹುದು. ಎಲ್ಲರಿಗೂ ಉಚಿತ ಪ್ರವೇಶವಿದೆ’ ಎಂದು ಮಾಹಿತಿ ನೀಡಿದರು.

ಈ ಕಾರ್ಯಕ್ರಮದಲ್ಲಿ ಇನ್ಫೊಸಿಸ್ ಪ್ರತಿಷ್ಠಾನದ ಸಂಸ್ಥಾಪಕಿ ಸುಧಾ ಮೂರ್ತಿ, ಆನೂರು ಅನಂತಕೃಷ್ಣ ಶರ್ಮ, ನಿರುಪಮಾ ರಾಜೇಂದ್ರ, ಪ್ರವೀಣ್.ಡಿ.ರಾವ್ ಭಾಗವಹಿಸಲಿದ್ದಾರೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT