ಭಾನುವಾರ, ಏಪ್ರಿಲ್ 5, 2020
19 °C

ಅಧಿಕಾರಿಗಳ ಅಮಾನತು

‍ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಅರ್ಹತೆ ಇಲ್ಲದ ಶಿಕ್ಷಕರನ್ನು ವಿಧಾನ ಪರಿಷತ್‌ ಶಿಕ್ಷಣ ಕ್ಷೇತ್ರದ ಮತದಾರರ ಪಟ್ಟಿಗೆ ಸೇರ್ಪಡೆ ಮಾಡಿದ್ದಕ್ಕೆ ತಹಶೀಲ್ದಾರ್ ಮತ್ತು ಕಂದಾಯ ಅಧಿಕಾರಿಯೊಬ್ಬರನ್ನು ಅಮಾನತು ಮಾಡಲಾಗಿದೆ. 

ಆನೇಕಲ್‌ ತಾಲ್ಲೂಕಿನ ಅರ್ಹತೆ ಇಲ್ಲದ 190 ಶಿಕ್ಷಕರ ಹೆಸರನ್ನು ತಹಶೀಲ್ದಾರ್‌ ದಿನೇಶ್‌ ಅವರು ಮತದಾರರ ಪಟ್ಟಿಯಲ್ಲಿ ಸೇರಿಸಿದ್ದರು. ಅದೇ ರೀತಿ, ರಾಜರಾಜೇಶ್ವರಿ ನಗರ ಉಪವಲಯದ ಬಿಬಿಎಂಪಿ ಕಂದಾಯ ಅಧಿಕಾರಿ ವೈ. ಬೈರೇಗೌಡ ಅವರು, 187 ಅನರ್ಹ ಮತದಾರರನ್ನು ಪಟ್ಟಿಗೆ ಸೇರಿಸಿದ್ದರು. ಹೀಗೆ, ಕರ್ತವ್ಯಲೋಪ ಎಸಗಿರುವ ಆರೋಪದಲ್ಲಿ ಈ ಇಬ್ಬರು ಅಧಿಕಾರಿಗಳನ್ನು ಪ್ರಾದೇಶಿಕ ಆಯುಕ್ತ ಇ.ಪಿ. ಇಕ್ಕೇರಿ ಅಮಾನತು ಮಾಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು