ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಹಂ ಇರುವ ಅಧಿಕಾರಿ ಯಶಸ್ವಿಯಾಗಲಾರ: ಮಂಜುನಾಥ್‌ ಪ್ರಸಾದ್‌

Last Updated 29 ಡಿಸೆಂಬರ್ 2021, 20:04 IST
ಅಕ್ಷರ ಗಾತ್ರ

ಬೆಂಗಳೂರು: ಸರ್ಕಾರಿ ಅಧಿಕಾರಿಗಳಲ್ಲಿ ಅಹಂ ಇದ್ದರೆ ಅವರು ವೃತ್ತಿಯಲ್ಲಿ ಯಶಸ್ಸು ಸಾಧಿಸಲು ಸಾಧ್ಯವಿಲ್ಲ. ತಾಳ್ಮೆಯಿಂದ ಜನರ ಮಾತು ಆಲಿಸುವ ಗುಣವುಳ್ಳವರು ಮಾತ್ರ ಯಶಸ್ವಿಯಾಗುತ್ತಾರೆ ಎಂದು ಮುಖ್ಯಮಂತ್ರಿ ಪ್ರಧಾನ ಕಾರ್ಯದರ್ಶಿ ಎನ್‌. ಮಂಜುನಾಥ್‌ ಪ್ರಸಾದ್‌ ಹೇಳಿದರು.

ಕರ್ನಾಟಕ ಮಾಧ್ಯಮ ಅಕಾಡೆಮಿ ಬುಧವಾರ ಆಯೋಜಿಸಿದ್ದ, ‘ಮಾಧ್ಯಮ, ಆಡಳಿತ, ಅಭಿವೃದ್ಧಿ’ ಕುರಿತ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಸಾಮಾನ್ಯ ಜನರು ತಮ್ಮ ಕಷ್ಟಗಳಿಗೆ ಪರಿಹಾರ ಪಡೆಯುವುದಕ್ಕಾಗಿಯೇ ಅಧಿಕಾರಿಗಳ ಬಳಿ ಬರುತ್ತಾರೆ. ಅವರ ಕಷ್ಟಕ್ಕೆ ಸ್ಪಂದಿಸುವುದು, ಅಹವಾಲುಗಳನ್ನು ಆಲಿಸುವುದೇ ಅಧಿಕಾರಿಯ ಮೊದಲ ಕರ್ತವ್ಯ’ ಎಂದರು.

ಜನಪರ ಕೆಲಸಗಳಿಗೆ ಅಡ್ಡಿಪಡಿಸುವ ಜನಪ್ರತಿನಿಧಿಗಳ ಸಂಖ್ಯೆ ಕಡಿಮೆ. ಅವರ ಜತೆ ಅಧಿಕಾರಿಗಳು ಸಂಘರ್ಷಕ್ಕೆ ಇಳಿದಾಗ ಮಾತ್ರ ಅಂತಹ ಸ್ಥಿತಿ ನಿರ್ಮಾಣವಾಗುತ್ತದೆ. ಬಿಬಿಎಂಪಿಯಲ್ಲಿ ನಾಲ್ಕು ವರ್ಷಗಳ ಕಾಲ ಆಯುಕ್ತರಾಗಿದ್ದ ಅವಧಿಯಲ್ಲಿ ಪಾಲಿಕೆಯ 198 ಮಂದಿ ಸದಸ್ಯರಲ್ಲಿ ಯಾರೊಬ್ಬರ ಜತೆಗೂ ಮುನಿಸಿಕೊಂಡ ಸಂದರ್ಭವೇ ಇಲ್ಲ ಎಂದು ಹೇಳಿದರು.

ಮಾಧ್ಯಮಗಳನ್ನು ಅಭಿವೃದ್ಧಿಗೆ ಪೂರಕವಾಗಿ ಬಳಸಿಕೊಳ್ಳುವುದಕ್ಕೆ ಅಧಿಕಾರಿಗಳು ಯೋಚಿಸಬೇಕು. ಸರ್ಕಾರದ ಜನಪರ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವುದಕ್ಕೆ ಮಾಧ್ಯಮಗಳ ಜತೆ ನಂಟು ಹೊಂದಿರಬೇಕು. ಆದರೆ, ವೈಯಕ್ತಿಕ ನೆಲೆಯಲ್ಲಿ ಅತಿಯಾದ ನಂಟು ಕೂಡ ಒಳ್ಳೆಯದಲ್ಲ ಎಂದು ಮಂಜುನಾಥ್‌ ಪ್ರಸಾದ್‌ ಹೇಳಿದರು.

ಕನ್ನಡಪ್ರಭ ಸಂಪಾದಕ ರವಿ ಹೆಗಡೆ ಕಾರ್ಯಕ್ರಮ ಉದ್ಘಾಟಿಸಿದರು. ಮಾಧ್ಯಮ ಅಕಾಡೆಮಿ ಅಧ್ಯಕ್ಷ ಕೆ. ಸದಾಶಿವ ಶೆಣೈ ಅಧ್ಯಕ್ಷತೆ ವಹಿಸಿದ್ದರು. ಸದಸ್ಯರಾದ ಕೆ.ಕೆ. ಮೂರ್ತಿ, ಕೂಡ್ಲಿ ಗುರುರಾಜ್‌, ಶಿವಕುಮಾರ್‌ ಬೆಳ್ಳಿತಟ್ಟೆ, ಬದ್ರುದ್ದೀನ್‌ ಮಾಣಿ, ಎಸ್‌. ಲಕ್ಷ್ಮೀನಾರಾಯಣ, ಎಂ. ಶಿವರಾಜ್‌ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT