ಸೋಮವಾರ, ಮೇ 17, 2021
24 °C

ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಕೊನೆಗೊಳಿಸಲು ಒತ್ತಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಅರ್ಧದಲ್ಲೇ ಬಾಕಿಯಾಗಿದ್ದು, ಈಗಾಗಲೇ ಹೊರಡಿಸಿರುವ ಅಧಿಸೂಚನೆಯಂತೆ ಕೌನ್ಸೆಲಿಂಗ್‌ ಅನ್ನು ಈ ತಿಂಗಳೊಳಗೆ ಮುಗಿಸಬೇಕು ಎಂಬ ನಿಟ್ಟಿನಲ್ಲಿ ಸರ್ಕಾರದ ಮೇಲೆ ಒತ್ತಡ ಬರತೊಡಗಿದೆ.

‘ಹಲವು ಜಿಲ್ಲೆಗಳಲ್ಲಿ ನೆರೆ ಹಾವಳಿಯಿಂದಾಗಿ ಶಿಕ್ಷಕರಿಗೂ ತೊಂದರೆಯಾಗಿದೆ. ಶೇ 20ಕ್ಕಿಂತ ಅಧಿಕ ಪ್ರಮಾಣದಲ್ಲಿ ಖಾಲಿ ಇರುವ ತಾಲ್ಲೂಕುಗಳಿಗೆ ಮಾತ್ರ ವರ್ಗಾವಣೆ ಎಂಬ ನಿಮಮ ಸಡಿಲಿಸಿದರೆ ಹಲವಾರು ಸಮಸ್ಯೆಗಳು ನಿವಾರಣೆಯಾಗುತ್ತವೆ. ಅದನ್ನು ಜಾರಿಗೆ ತಂದು ಈಗಾಗಲೇ ನಡೆದಿರುವ ವರ್ಗಾವಣೆಯ ಪ್ರಕ್ರಿಯೆ ಮುಂದುವರಿಸಲು ಒತ್ತಾಯಿಸಿ ಸೋಮವಾರ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಮನವಿ ಮಾಡಲಿದ್ದೇವೆ’ ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ವಿ.ಎಂ.ನಾರಾಯಣಸ್ವಾಮಿ ‘ಪ್ರಜಾವಾಣಿ’ಗೆ ತಿಳಿಸಿದರು.

‘ಕಾನೂನು ತಜ್ಞರ ಅಭಿಪ್ರಾಯ ಪಡೆದಿರುವ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು ಮುಖ್ಯಮಂತ್ರಿಗೆ ಸಲಹೆ ನೀಡಲು ಸಜ್ಜಾಗಿದ್ದಾರೆ. ಆದರೆ ಇನ್ನೂ ಸಮಯ ಸಿಕ್ಕಿಲ್ಲ. ಸೋಮವಾರ ಇದಕ್ಕೆ ಅವಕಾಶ ಸಿಗುವ ಸಾಧ್ಯತೆ ಇದೆ. ಮಂಗಳವಾರ ಸಂಪುಟ ವಿಸ್ತರಣೆಯ ಬಳಿಕ ವರ್ಗಾವಣೆ ಪ್ರಕ್ರಿಯೆ ಮತ್ತೆ ಚಾಲನೆಗೊಳ್ಳುವ ಸಾಧ್ಯತೆ ಇದೆ’ ಎಂದು ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಹೇಳಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು