ಬೆಂಗಳೂರು: ರಾಜ್ಯ ಒಕ್ಕಲಿಗರ ಸಂಘವು ಇದೇ 31ರಂದು ಬೆಳಿಗ್ಗೆ 11 ಗಂಟೆಗೆಅರಮನೆ ಮೈದಾನದಲ್ಲಿ (ಗಾಯತ್ರಿ ವಿಹಾರ ಮತ್ತು ಗಾಯತ್ರಿ ವೃಕ್ಷ) ಸರ್ವಸದಸ್ಯರ ಸಭೆ ಮತ್ತು ವಿಶೇಷ ಸರ್ವ ಸದಸ್ಯರ ಸಭೆಯನ್ನು ಹಮ್ಮಿಕೊಂಡಿದೆ.

ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿದ ಸಂಘದ ಅಧ್ಯಕ್ಷ ಎಲ್. ಶ್ರೀನಿವಾಸ್, ‘11 ವರ್ಷಗಳ ಬಳಿಕ ಸರ್ವಸದಸ್ಯರ ಸಭೆಯನ್ನು ಮಾಡಲಾಗುತ್ತಿದೆ. 2016ರ ನಂತರ ಕಾರಣಾಂತರಗಳಿಂದ ಸರ್ವಸದಸ್ಯರ ಸಭೆ ನಡೆದಿರಲಿಲ್ಲ. ಈಗ ನಮ್ಮ ಸಮಿತಿಯು ಆಡಳಿತ ವರದಿ ಮಂಡಿಸಲು ಸರ್ವಸದಸ್ಯರ ಸಭೆ ಕರೆದಿದೆ. ಅಂದು ಮಧ್ಯಾಹ್ನ 3 ಗಂಟೆಯ ಬಳಿಕ ವಿಶೇಷ ಸರ್ವಸದಸ್ಯರ ಸಭೆ ನಡೆಯಲಿದೆ. ಸಂಘದಲ್ಲಿ 6.5 ಲಕ್ಷ ಸದಸ್ಯರಿದ್ದು, ಅವರು ತಮ್ಮ ಗುರುತಿನ ಚೀಟಿಯೊಂದಿಗೆ ಸಭೆಯಲ್ಲಿ ಭಾಗವಹಿಸಬೇಕು’ ಎಂದು ಮನವಿ ಮಾಡಿದರು.

ಸಂಘದ ಗೌರವಾಧ್ಯಕ್ಷ ಕೆಂಚಪ್ಪಗೌಡ, ಸಂಘದ ಪ್ರಧಾನ ಕಾರ್ಯದರ್ಶಿ ಸಿ.ಜಿ.ಗಂಗಾಧರ್ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-15-1395916437

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.