ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪತ್ರಕರ್ತ ರಾಜಶೇಖರ್, ವಿಮರ್ಶಕ ನಾಗಭೂಷಣ ಸ್ವಾಮಿಗೆ ಪ್ರಶಸ್ತಿ

Last Updated 23 ಜನವರಿ 2021, 14:46 IST
ಅಕ್ಷರ ಗಾತ್ರ

ಬೆಂಗಳೂರು: ಬಿಎಂಶ್ರೀ ಪ್ರತಿಷ್ಠಾನದಿಂದ ನೀಡಲಾಗುವ ‘ಎಲ್.ಎಸ್.ಶೇಷಗಿರಿರಾವ್ ವಿಮರ್ಶಾ ಪ್ರಶಸ್ತಿ’ಗೆ ವಿಮರ್ಶಕ ಓ.ಎಲ್.ನಾಗಭೂಷಣ ಸ್ವಾಮಿ ಹಾಗೂ ‘ವಿ.ನಾಗರಾಜರಾವ್‌ ಸಮೂಹ ಮಾಧ್ಯಮ ಪ್ರಶಸ್ತಿ’ಗೆ ಹಿರಿಯ ಪತ್ರಕರ್ತ ಡಿ.ವಿ.ರಾಜಶೇಖರ್ ಅವರನ್ನು ಆಯ್ಕೆ ಮಾಡಲಾಗಿದೆ.

ಪ್ರಶಸ್ತಿ ತಲಾ ₹10 ಸಾವಿರ ನಗದು ಹಾಗೂ ಸ್ಮರಣಿಕೆ ಒಳಗೊಂಡಿವೆ.

ಪ್ರತಿಷ್ಠಾನದ ಎಂವಿಸಿ ಸಭಾಂಗಣದಲ್ಲಿ ಫೆ.21ರಂದು ಬೆಳಿಗ್ಗೆ 10.30ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ ಪುರಸ್ಕೃತರಿಗೆ ರಾಜ್ಯಸಭಾ ಸದಸ್ಯ ಎಲ್.ಹನುಮಂತಯ್ಯ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಪ್ರತಿಷ್ಠಾನದ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT