ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಓಲಾ ಕ್ಯಾಬ್ ಚಾಲಕ ಆತ್ಮಹತ್ಯೆ

Last Updated 2 ಜುಲೈ 2022, 19:27 IST
ಅಕ್ಷರ ಗಾತ್ರ

ಬೆಂಗಳೂರು: ಬಾಗಲಗುಂಟೆ ಠಾಣೆ ವ್ಯಾಪ್ತಿಯಲ್ಲಿ ಸಂಜಯ್ (21) ಎಂಬುವವರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

‘ಬಾಗಲಕೋಟೆಯ ಸಂಜಯ್, ಕೆಲ ವರ್ಷಗಳ ಹಿಂದೆ ನಗರಕ್ಕೆ ಬಂದಿದ್ದರು. ಓಲಾ ಕಂಪನಿ ಕ್ಯಾಬ್ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಅಣ್ಣನ ಜೊತೆಯಲ್ಲಿ ಟಿ. ದಾಸರಹಳ್ಳಿಯಲ್ಲಿ ವಾಸವಿದ್ದರು’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ಮನೆಯ ಕೊಠಡಿಯಲ್ಲಿ ನೇಣು ಹಾಕಿಕೊಂಡು ಸಂಜಯ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕುಟುಂಬಸ್ಥರು ಹಾಗೂ ಸ್ನೇಹಿತರಿಂದ ಹೇಳಿಕೆ ಪಡೆದು ಪ್ರಕರಣ ದಾಖಲಿಸಿಕೊಂಡು, ತನಿಖೆ ಆರಂಭಿಸಲಾಗಿದೆ’ ಎಂದು ತಿಳಿಸಿವೆ.

‘ಯುವತಿಯೊಬ್ಬರನ್ನು ಸಂಜಯ್ ಒಂದು ವರ್ಷದಿಂದ ಪ್ರೀತಿಸುತ್ತಿದ್ದರು. ಆದರೆ, ಯುವತಿ ಪ್ರೀತಿಗೆ ಒಪ್ಪಿರಲಿಲ್ಲ. ಇದೇ ವಿಚಾರವಾಗಿ ನೊಂದಿದ್ದ ಸಂಜಯ್, ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಕೆಲವರು ಹೇಳುತ್ತಿದ್ದಾರೆ. ಈ ಬಗ್ಗೆ ಪರಿಶೀಲಿಸಲಾಗುತ್ತಿದೆ’ ಎಂದು ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT