ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಓಲಾ–ಉಬರ್ ಆಟೊ ದರ: ಹೈಕೋರ್ಟ್‌ಗೆ ವರದಿ ಇಂದು

Last Updated 6 ನವೆಂಬರ್ 2022, 21:12 IST
ಅಕ್ಷರ ಗಾತ್ರ

ಬೆಂಗಳೂರು: ಆ್ಯಪ್ ಆಧಾರಿತ ಆಟೊರಿಕ್ಷಾ ಪ್ರಯಾಣಿಕ ಸೇವೆಗೆ ಪ್ರತ್ಯೇಕ ದರ ನಿಗದಿ ಸಂಬಂಧ ವರದಿಯನ್ನು ಸಾರಿಗೆ ಇಲಾಖೆ ಸೋಮವಾರ ಹೈಕೋರ್ಟ್‌ಗೆ ಸಲ್ಲಿಸಲಿದೆ.

ಈ ಸಂಬಂಧ ಅಗ್ರಿಗೇಟರ್ ಕಂಪನಿ ಗಳು ಸಲ್ಲಿಸಿರುವ ಅರ್ಜಿ ಹೈಕೋರ್ಟ್‌ನಲ್ಲಿ ಸೋಮವಾರ ವಿಚಾರಣೆಗೆ ಬರಲಿದೆ. ಅಗ್ರಿಗೇಟರ್ ಕಂಪನಿಗಳಾದ ಓಲಾ, ಉಬರ್, ರ್‍ಯಾಪಿಡೊ ಪ್ರತಿನಿಧಿಗಳ ಜತೆ ಸಾರಿಗೆ ಇಲಾಖೆ ಕಾರ್ಯದರ್ಶಿ ಅವರು ಕಳೆದ ವಾರ ಸಭೆ ನಡೆಸಿ ಮಾಹಿತಿ ಪಡೆದುಕೊಂಡಿದ್ದರು. ಬೇಡಿಕೆಗೆ ತಕ್ಕಂತೆ ದರ ನಿಗದಿ ಮಾಡಿಕೊಳ್ಳಲು ಅವಕಾಶ ನೀಡಬೇಕು ಎಂದು ಕಂಪನಿಗಳು ಪಟ್ಟು ಹಿಡಿದಿದ್ದವು. ಇದಕ್ಕೆ ಒಮ್ಮತ ಮೂಡದೆ ಸಭೆ ಅಂತ್ಯಗೊಂಡಿತ್ತು.

ವಾಹನ ದಟ್ಟಣೆ ಅವಧಿಯಲ್ಲಿ ಸಿಗ್ನಲ್‌ಗಳಲ್ಲೇ ಸಾಕಷ್ಟು ಸಮಯ ವ್ಯರ್ಥ ವಾಗುತ್ತದೆ. ಸಾಮಾನ್ಯ ಆಟೊರಿಕ್ಷಾಗಳಿಗೆ ವಿಧಿಸಿದಂತೆ ದರ ನಿಗದಿಪಡಿಸಿದರೆ ತೆರಿಗೆ, ಚಾಲಕರಿಗೆ ನೀಡುವ ಪ್ರೋತ್ಸಾಹಧನ ಸೇರಿ ಮತ್ತಿತರ ಸೇವೆ ಒದಗಿಸುವುದು ಕಷ್ಟ. ಆದ್ದರಿಂದ ಬೇಡಿಕೆ ತಕ್ಕಂತೆ ದರ ಪರಿಷ್ಕರಣೆ ಮಾಡಿಕೊಳ್ಳಲು ಅವಕಾಶ ನೀಡಬೇಕು ಎಂದು ಕಂಪನಿಗಳು ಬೇಡಿಕೆ ಇಟ್ಟಿದ್ದವು.

ಬೇಡಿಕೆ ಆಧರಿಸಿ ದರ ಪರಿಷ್ಕರಣೆ ಗೆ ಅವಕಾಶ ನೀಡಿದರೆ ಪ್ರಯಾಣಿಕರಿಗೆ ಹೊರೆಯಾಗಲಿದೆ ಎಂಬ ಕಾರಣಕ್ಕೆ ಅಧಿಕಾರಿಗಳು ಇದಕ್ಕೆ ಒಪ್ಪಿರಲಿಲ್ಲ.

‘ಸಭೆ ವಿವರವನ್ನು ಹೈಕೋರ್ಟ್‌ಗೆ ಸಲ್ಲಿಸಲಾಗುವುದು. ನ್ಯಾಯಾಲಯದ ಆದೇಶದಂತೆ ಮುಂದುವರಿಯಲಾಗುವುದು’ ಎಂದು ಸಾರಿಗೆ ಇಲಾಖೆ ಕಾರ್ಯ ದರ್ಶಿ ಎನ್.ವಿ.ಪ್ರಸಾದ್ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT