ಬೆಂಗಳೂರು: ‘ವಿಧಾನ ಮಂಡಲದ ಅಧಿವೇಶನಕ್ಕೆ ಲೋಕಸಭೆಯ ಸ್ಪೀಕರ್ ಕರೆಸುವ ರಾಜ್ಯ ಸರ್ಕಾರದ ತೀರ್ಮಾನ ಸಂಸದೀಯ ಪ್ರಜಾಸತ್ತೆಯ ಮೌಲ್ಯಗಳಿಗೆ ವಿರುದ್ಧವಾದ ನಡೆ’ ಎಂದು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣಗೌಡ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

‘ಈ ರೀತಿಯ ಉದಾಹರಣೆ ಕರ್ನಾಟಕದ ಇತಿಹಾಸದಲ್ಲಿ ನಡೆದಿರಲಿಲ್ಲ. ಈ ನಡೆಯ ಮೂಲಕ ಕೆಟ್ಟ ಪರಂಪರೆಯೊಂದನ್ನು ಆರಂಭಿಸಲಾಗುತ್ತಿದೆ. ವಿಧಾನಮಂಡಲದ ಉಭಯ ಸದನಗಳನ್ನು ಉದ್ದೇಶಿಸಿ ಮಾತನಾಡುವ ಅವಕಾಶ ಇರುವುದು ರಾಷ್ಟ್ರಪತಿ ಮತ್ತು ರಾಜ್ಯಪಾಲರಿಗೆ ಮಾತ್ರ. ಲೋಕಸಭೆ ಸ್ಪೀಕರ್ ಕರೆಯಿಸುವ ಮೂಲಕ ಈ ನಿಯಮವನ್ನು ಗಾಳಿಗೆ ತೂರಲಾಗಿದೆ. ಇದು ಒಕ್ಕೂಟ ಪ್ರಜಾತಂತ್ರ ವ್ಯವಸ್ಥೆಯ ಅಣಕ’ ಎಂದು ತಿಳಿಸಿದ್ದಾರೆ.

‘ಲೋಕಸಭೆ ಮತ್ತು ವಿಧಾನಸಭೆ ಎರಡೂ ಕೂಡ ಜನಪ್ರತಿನಿಧಿಗಳ ಸಭೆ. ಒಂದು ಹೆಚ್ಚು, ಒಂದು ಕಡಿಮೆಯಲ್ಲ. ಎರಡು ಕೂಡ ಭಾರತ ಸಂವಿಧಾನದ ಪ್ರಕಾರವೇ ನಡೆಯುತ್ತವೆ. ವಿಧಾನ ಮಂಡಲದಲ್ಲಿ ಲೋಕಸಭೆ ಸ್ಪೀಕರ್ ಕರೆಯಿಸುವ ಔಚಿತ್ಯವಾದರೂ ಏನು. ಈ ಸಂಪ್ರದಾಯ ಹುಟ್ಟುಹಾಕುವ ಅಗತ್ಯವಾದರೂ ಏನಿತ್ತು’ ಎಂದು ಪ್ರಶ್ನಿಸಿದ್ದಾರೆ.

‘ಜಂಟಿ ಅಧಿವೇಶವನ್ನು ಕೂಡಲೇ ರದ್ದುಗೊಳಿಸಬೇಕು. ಲೋಕಸಭೆ ಸ್ಪೀಕರ್ ಜತೆ ಬೇರೆ ಸ್ಥಳದಲ್ಲಿ ಕಾರ್ಯಕ್ರಮ ನಡೆಸಿಕೊಳ್ಳಲಿ. ಕರ್ನಾಟಕ ವಿಧಾನಮಂಡಲದ ಪಾವಿತ್ರ್ಯವನ್ನು ಹಾಳುಗೆಡಹುವುದು ಬೇಡ’ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.