ಸೋಮವಾರ, ಆಗಸ್ಟ್ 2, 2021
20 °C
ಸಿಬ್ಬಂದಿಗೆ ಪೂರ್ವಭಾವಿ ಲಕ್ಷಣ ಇರಲಿಲ್ಲ

ಬಿಎಂಟಿಸಿ ಉದ್ಯೋಗಿಗೆ ಕೊರೊನಾ ಸೋಂಕು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ಉದ್ಯೋಗಿಯೊಬ್ಬರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. 

ಸೋಂಕು ತಗುಲಿರುವುದು ಖಚಿತಪಡುತ್ತಿದ್ದಂತೆಯೇ ನೌಕರನನ್ನು ಚಿಕಿತ್ಸೆಗಾಗಿ ನಗರದ ನಿಗದಿತ ಕೋವಿಡ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ದೈನಂದಿನ ಕರ್ತವ್ಯದಲ್ಲಿದ್ದ ನೌಕರನಿಗೆ ಜ್ವರ,ಕೆಮ್ಮು ಮತ್ತು ಶೀತದಂತಹ ರೋಗಲಕ್ಷಣಗಳು ಅಥವಾ ಆರೋಗ್ಯ ಸಮಸ್ಯೆಗಳು ಕಾಣಿಸಿರಲಿಲ್ಲ.

ಮೂರು ದಿನ ರಜೆಯಲ್ಲಿ ತೆರಳಿದ್ದ ನೌಕರ ಕಲಬುರಗಿ ಮತ್ತು ವಿಜಯಪುರ ಜಿಲ್ಲೆಗಳಿಗೆ ಹೋಗಿದ್ದರು ಎಂದು ತಿಳಿದು ಬಂದಿದೆ. ಪ್ರವಾಸದ ಹಿನ್ನೆಲೆಯಲ್ಲಿ ಕರ್ತವ್ಯಕ್ಕೆ ಹಾಜರಾಗುತ್ತಲೇ ಸ್ವಯಂಪ್ರೇರಿತವಾಗಿ ಕೋವಿಡ್‌–19 ತಪಾಸಣೆಗೆ ಒಳಪಟ್ಟಿದ್ದರು.

ಬುಧವಾರ (ಜೂನ್ 10) ವರದಿ ಕೈಸೇರಿದ್ದು ಸೋಂಕು ದೃಢಪಟ್ಟಿದೆ. ಕೂಡಲೇ ಅವರ ಸಂಪರ್ಕದಲ್ಲಿರುವ ವ್ಯಕ್ತಿಗಳನ್ನು ಪತ್ತೆ ಹಚ್ಚುವ ಕೆಲಸ ಆರಂಭವಾಗಿದೆ. ಅವರು ಕೆಲಸ ಮಾಡುತ್ತಿದ್ದ ಸ್ಥಳವನ್ನು ಸಂಪೂರ್ಣ ಸಾನಿಟೈಸ್‌ ಮಾಡಲಾಗಿದೆ ಎಂದು ಬಿಎಂಟಿಸಿ ಪ್ರಕಟಣೆ ತಿಳಿಸಿದೆ.

ಸೋಂಕಿತ ಬಿಎಂಟಿಸಿ ನೌಕರ ಚಾಲಕನೇ ಅಥವಾ ನಿರ್ವಾಹಕನೇ ಎಂಬ ಮಾಹಿತಿಯನ್ನು ಬಿಎಂಟಿಸಿ ಬಹಿರಂಗಪಡಿಸಿಲ್ಲ. ಆದರೆ, ಸಂಸ್ಥೆಯ ಸಿಬ್ಬಂದಿ ಮತ್ತು ಪ್ರಯಾಣಿಕರ ಸುರಕ್ಷತೆಗಾಗಿ ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಂಡಿರುವುದಾಗಿ ಹೇಳಿದೆ. ಸಾರ್ವಜನಿಕರು ಭಯಬೀಳುವ ಅಗತ್ಯವಿಲ್ಲ ಎಂದು ಮನವಿ ಮಾಡಿಕೊಂಡಿದೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು