ಬುಧವಾರ, ಆಗಸ್ಟ್ 17, 2022
25 °C

ಆನ್‌ಲೈನ್ ಬೆಟ್ಟಿಂಗ್‌ಗೆ ತಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಆನ್‌ಲೈನ್ ಬೆಟ್ಟಿಂಗ್‌ ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್‌) ವಿಲೇವಾರಿ ಆಗುವ ತನಕ ಮೈಸೂರು ಮತ್ತು ಬೆಂಗಳೂರಿನಲ್ಲಿ ಆನ್‌ಲೈನ್ ಬೆಟ್ಟಿಂಗ್ ಅನ್ನು ಸರ್ಕಾರ ತಡೆ ಹಿಡಿದಿದೆ.

ಜುಲೈನಲ್ಲಿ ಸರ್ಕಾರ ಅನುಮತಿ ನೀಡಿದ ಬಳಿಕ ಬೆಂಗಳೂರು ಟರ್ಫ್‌ ಕ್ಲಬ್ ಮತ್ತು ಮೈಸೂರಿನ ರೇಸ್ ಕ್ಲಬ್‌ ಎರಡೂ ನವೆಂಬರ್‌ನಲ್ಲಿ ಆನ್‌ಲೈನ್ ಬೆಟ್ಟಿಂಗ್ ಆರಂಭಿಸಿದ್ದವು.

ಇದರಿಂದ ದುಷ್ಪರಿಣಾಮಗಳು ಉಂಟಾಗಲಿವೆ ಎಂದು ಆರೋಪಿಸಿ ಸಿ. ಗೋಪಾಲ್ ಎಂಬುವರ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಆಧರಿಸಿ ಹೈಕೋರ್ಟ್ ಸರ್ಕಾರದ ಪ್ರತಿಕ್ರಿಯೆ ಕೇಳಿ ನೋಟಿಸ್ ನೀಡಿತ್ತು. ಯಾವ ಕಾನೂನಿನ ಅಡಿ ಆನ್‌ಲೈನ್ ಬೆಟ್ಟಿಂಗ್‌ಗೆ ಅವಕಾಶ ನೀಡಲಾಗಿದೆ ಎಂಬುದನ್ನು ಸ್ಪಷ್ಟಪಡಿಸುವಂತೆಯೂ ತಿಳಿಸಿತ್ತು.

‘ಸದ್ಯಕ್ಕೆ ಬೆಟ್ಟಿಂಗ್ ರದ್ದು ಮಾಡಿಲ್ಲ. ತಡೆ ಹಿಡಿಯಲಾಗಿದೆ. ಈ ಸಂಬಂಧ ನ್ಯಾಯಾಲಯಕ್ಕೂ ಹೇಳಿಕೆ ಸಲ್ಲಿಸಲಾಗಿದೆ’ ಎಂದು ಹಣಕಾಸು ಇಲಾಖೆ ಕಾರ್ಯದರ್ಶಿ ಏಕರೂಪ್ ಕೌರ್ ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು