ಭಾನುವಾರ, ಜೂಲೈ 12, 2020
22 °C

ಆನ್‌ಲೈನ್ ಶಿಕ್ಷಣಕ್ಕೆ ಅವಕಾಶ; ಆದೇಶ ಮಾರ್ಪಡಿಸಿದ ಸರ್ಕಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಒಂದರಿಂದ ಐದನೇ ತರಗತಿವರೆಗೆ ಆನ್‌ಲೈನ್ ತರಗತಿಗಳಿಗೆ ಅವಕಾಶ ಕಲ್ಪಿಸಿರುವ ಮಾರ್ಪಾಡು ಆದೇಶವನ್ನು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಸಲ್ಲಿಸಿದೆ.

ಆನ್‌ಲೈನ್‌ ಶಿಕ್ಷಣ ನಿಷೇಧಿಸಿರುವ ರಾಜ್ಯ ಸರ್ಕಾರದ ಆದೇಶ ರದ್ದು ಕೋರಿ ಅನುಮಿತಾ ಶರ್ಮಾ ಸೇರಿದಂತೆ ಪೋಷಕರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಸರ್ಕಾರಿ ವಕೀಲರು, ಈ ಸಂಬಂಧ ಸಾರ್ವಜನಿಕ ಶಿಕ್ಷಣ ಇಲಾಖೆ ಇದೇ 28ರಂದು ಹೊರಡಿಸಿರುವ ಹೊಸ ಆದೇಶವನ್ನು ನ್ಯಾಯಪೀಠಕ್ಕೆ ಸಲ್ಲಿಸಿದರು.

‘ತಜ್ಞರ ಸಮಿತಿ ವರದಿ ಆಧರಿಸಿ ಹೊಸ ನಿಯಮ ರೂಪಿಸುವತನಕ ಸೀಮಿತ ರೀತಿಯಲ್ಲಿ ಆನ್‌ಲೈನ್‌ ತರಗತಿಗಳಿಗೆ ಅವಕಾಶ ಕಲ್ಪಿಸಲಾಗಿದೆ’ ಎಂದರು.

ಮೂಲ ಆದೇಶ ತಿದ್ದುಪಡಿ ಮಾಡಲು ಸರ್ಕಾರಕ್ಕೆ ಎರಡು ವಾರಗಳ ಕಾಲಾವಕಾಶ ನೀಡಿದ ನ್ಯಾಯಪೀಠ ಜುಲೈ 2ಕ್ಕೆ ವಿಚಾರಣೆ ಮುಂದೂಡಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು