ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆನ್‌ಲೈನ್‌ ಮದ್ಯ; ₹ 1.48 ಲಕ್ಷ ವಂಚನೆ

Last Updated 20 ಜೂನ್ 2021, 16:20 IST
ಅಕ್ಷರ ಗಾತ್ರ

ಬೆಂಗಳೂರು: ಆನ್‌ಲೈನ್‌ನಲ್ಲಿ ಮದ್ಯ ಖರೀದಿಸಿದ್ದ ನಗರದ ಯುವಕರೊಬ್ಬರು, ಅದರ ಬಿಲ್ ಪಾವತಿಸಲು ಹೋಗಿ ₹ 1.48 ಲಕ್ಷ ಕಳೆದುಕೊಂಡಿದ್ದಾರೆ.

ಹೊಸೂರು ರಸ್ತೆಯ ಲವಕುಶ ನಗರದ 25 ವರ್ಷದ ಯುವಕ ವಂಚನೆ ಬಗ್ಗೆ ದೂರು ನೀಡಿದ್ದಾರೆ. ಅಪರಿಚಿತನ ವಿರುದ್ಧ ದಕ್ಷಿಣ ವಿಭಾಗ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ದೂರುದಾರರು ಮೇ 24ರಂದು ಜಾಲತಾಣವೊಂದರಲ್ಲಿ ಆನ್‌ಲೈನ್‌ ಮೂಲಕ ಮದ್ಯ ಖರೀದಿಸಿದ್ದರು. ಅದರ ಬಿಲ್ ಪಾವತಿ ಮಾಡುವಂತೆ ಜಾಲತಾಣದ ಪ್ರತಿನಿಧಿ, ಕ್ಯೂಆರ್‌ ಕೋಡ್ ಕಳುಹಿಸಿದ್ದರು. ಅದನ್ನು ಸ್ಕ್ಯಾನ್ ಮಾಡುತ್ತಿದ್ದಂತೆ ದೂರುದಾರರ ಬ್ಯಾಂಕ್ ಖಾತೆಯಿಂದ ಹಂತ ಹಂತವಾಗಿ ₹ 1.48 ಲಕ್ಷ ಕಡಿತವಾಗಿದೆ’ ಎಂದು ಪೊಲೀಸರು ಹೇಳಿದರು.

‘ಮದ್ಯ ಮಾರಾಟ ಸೋಗಿನಲ್ಲಿ ಸೈಬರ್ ವಂಚಕರು ಕೃತ್ಯ ಎಸಗಿರುವ ಅನುಮಾನವಿದೆ’ ಎಂದೂ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT