ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಣ ಪಡೆದು ವಂಚಿಸಿದ ಆನ್‌ಲೈನ್ ವಧು

Last Updated 2 ಆಗಸ್ಟ್ 2021, 16:17 IST
ಅಕ್ಷರ ಗಾತ್ರ

ಬೆಂಗಳೂರು: ವೈವಾಹಿಕ ಜಾಲತಾಣ ಮೂಲಕ ಪರಿಚಯವಾಗಿದ್ದ ಯುವತಿಯೊಬ್ಬಳು ನಗರದ ಯುವಕನಿಂದ ₹ 1.60 ಲಕ್ಷ ಪಡೆದು ವಂಚಿಸಿದ್ದು, ಈ ಬಗ್ಗೆ ಈಶಾನ್ಯ ವಿಭಾಗದ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸಂಬಂಧ ದೊಡ್ಡಗುಬ್ಬಿಯ ನಿವಾಸಿಯೊಬ್ಬರು ದೂರು ನೀಡಿದ್ದಾರೆ.

‘ಚಾಲಕರಾದ ದೂರುದಾರ, ವಧುಗಾಗಿ ಹುಡುಕಾಡುತ್ತಿದ್ದರು. ಮ್ಯಾಟ್ರಿಮೋನಿ ಜಾಲತಾಣದಲ್ಲಿ ಖಾತೆ ತೆರೆದಿದ್ದರು. ಅಲ್ಲಿಯೇ ಅವರಿಗೆ ಯುವತಿ ಪರಿಚಯವಾಗಿತ್ತು. ನಂತರ, ಪರಸ್ಪರ ಮಾತುಕತೆ ಆರಂಭವಾಗಿತ್ತು. ಈ ಸಂಗತಿ ದೂರಿನಲ್ಲಿದೆ’ ಎಂದೂ ಪೊಲೀಸ್ ಮೂಲಗಳು ಹೇಳಿವೆ.

‘ತನ್ನ ತಂದೆಗೆ ಹೃದಯ ಶಸ್ತ್ರಚಿಕಿತ್ಸೆ ಮಾಡಿಸಬೇಕೆಂದು ಹೇಳಿದ್ದ ಯುವತಿ, ಅದಕ್ಕಾಗಿ ಹಣ ಕೇಳಿದ್ದಳು. ಆಕೆಯ ಮಾತು ನಂಬಿದ್ದ ಆರೋಪಿ, ₹1.60 ಲಕ್ಷ ಕೊಟ್ಟಿದ್ದಾರೆ. ಇದೀಗ ಯುವತಿ ನಾಪತ್ತೆಯಾಗಿದ್ದಾಳೆ’ ಎಂದೂ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT