ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆನ್‌ಲೈನ್‌ನಲ್ಲಿ ಸಂಗೀತ: ನೋಂದಣಿಗೆ ಆಹ್ವಾನ

Last Updated 21 ಮೇ 2020, 22:21 IST
ಅಕ್ಷರ ಗಾತ್ರ

ಬೆಂಗಳೂರು:ಶಾಸ್ತ್ರೀಯ ಮತ್ತು ಜನಪದ ಸಂಗೀತ ಉತ್ತೇಜಿಸುವ ಸಂಸ್ಥೆ ‘ಸ್ಪಿಕ್‌ ಮೈಕೆ’ ಈ ಬಾರಿ ಆನ್‌ಲೈನ್‌ನಲ್ಲಿ ‘ಅನುಭವ ಸಿರೀಸ್‌’ ಕಾರ್ಯಕ್ರಮವನ್ನು ಆಯೋಜಿಸಿದೆ.

ಖ್ಯಾತ ಸಂಗೀತ ವಿದ್ವಾಂಸರ ಕಾರ್ಯಕ್ರಮವಲ್ಲದೆ, ಯೋಗ, ನೃತ್ಯ, ಸಿನಿಮಾಗಳ ಪ್ರದರ್ಶನವೂ ಇರಲಿದೆ. ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗುವ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ನಮ್ಮ ದೇಶದ ಪರಂಪರೆ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಪ್ರಯತ್ನವೂ ಇದಾಗಿದೆ.

ಶಾಲಾ, ಕಾಲೇಜುಗಳು ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆನ್‌ಲೈನ್‌ನಲ್ಲಿ ಉಚಿತವಾಗಿ ಹೆಸರು ನೋಂದಾಯಿಸಬಹುದು. ಮುಂದಿನ ಜೂನ್‌ 1ರಿಂದ 7ರವರೆಗೆ ಸಂಸ್ಥೆಯ ಯೂಟ್ಯೂಬ್‌ ಚಾನೆಲ್‌ನಲ್ಲಿ ಕಾರ್ಯಕ್ರಮ ಪ್ರಸಾರವಾಗಲಿದೆ.

http://www.spicmacay.org/Convention/anubhav/registration ಈ ಲಿಂಕ್‌ ಮೂಲಕ ಹೆಸರು ನೋಂದಾಯಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT