ಬೆಂಗಳೂರು: ‘ನಮ್ಮ ಕ್ಲಿನಿಕ್ನ ಅಭಿವೃದ್ಧಿ ಕಾಮಗಾರಿಗಳಿಗೆ ಆನ್ಲೈನ್ ಮತ್ತು ಆಫ್ಲೈನ್ನಲ್ಲೂ ಹಣ ಬಿಡುಗಡೆ ಮಾಡಲಾಗಿದೆ’ ಎಂದು ಬಿಬಿಎಂಪಿಗೆ ಲೆಕ್ಕಪರಿಶೋಧಕರ ಸಮಿತಿ ತಿಳಿಸಿದೆ.

‘ನಮ್ಮ ಕ್ಲಿನಿಕ್ ಸ್ಥಾಪನೆ ಹಾಗೂ ಅಭಿವೃದ್ಧಿಗೆ ಲೆಕ್ಕ ಶೀರ್ಷಿಕೆ ಪಿ–3380: ನಮ್ಮ ಕ್ಲಿನಿಕ್ ಅಡಿ ಅನುದಾನ ಮೀಸಲಾಗಿದೆ. ಈ ಕಾಮಗಾರಿಗಳನ್ನು ನಿರ್ವಹಿಸಿದ ಗುತ್ತಿಗೆದಾರರ ಬಾಕಿ ಬಿಲ್ಗಳನ್ನು ಮುಖ್ಯ ಆರೋಗ್ಯಾಧಿಕಾರಿ ಅಥವಾ ಮುಖ್ಯ ಲೆಕ್ಕಾಧಿಕಾರಿ ಕಚೇರಿಯಲ್ಲಿ ಮಾತ್ರ ಪಾವತಿಸಬೇಕು. ಆದರೆ, ದಕ್ಷಿಣ ಹಾಗೂ ಪಶ್ಚಿಮ ವಲಯಗಳ ವಾರ್ಡ್ 173, 174, 167, 177ರಲ್ಲಿ ಮುಖ್ಯ ಆರೋಗ್ಯಾಧಿಕಾರಿಗಳು ಆಫ್ ಲೈನ್ನಲ್ಲಿ ಬಿಲ್ ಪಾವತಿ ಮಾಡಿದ್ದಾರೆ. ಅದೇ ಬಿಲ್ಗಳಿಗೆ ಮುಖ್ಯ ಲೆಕ್ಕಾಧಿಕಾರಿಗಳ ಕಚೇರಿಯಿಂದ ಜಾಬ್ಕೋಡ್ ಮೂಲಕ ಆನ್ಲೈನ್ನಲ್ಲಿ ಹಣ ವರ್ಗಾವಣೆ ಮಾಡಿದ್ದಾರೆ. ಒಟ್ಟಾರೆ ₹12.5 ಲಕ್ಷ ಮೊತ್ತ ಎರಡು ಬಾರಿ ಪಾವತಿಯಾಗಿದೆ. ಇದರಿಂದ ಪಾಲಿಕೆಗೆ ಆರ್ಥಿಕ ನಷ್ಟ ಉಂಟು ಮಾಡಿ, ಗುತ್ತಿಗೆದಾರರಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ. ಒಂದೇ ಕೆಲಸಕ್ಕೆ ಎರಡು ಬಾರಿ ಹಣ ಪಾವತಿ ಆಗಿರುವುದಕ್ಕೆ ಕಾರಣರಾದ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳಬೇಕು. ಗುತ್ತಿಗೆದಾರರಿಂದ ಹಣ ವಸೂಲಿ ಮಾಡಬೇಕು’ ಎಂದು ಸಮಿತಿ ಶಿಫಾರಸು ಮಾಡಿದೆ ಎಂದು ತಿಳಿದುಬಂದಿದೆ.

‘ಈ ರೀತಿ ಹಲವು ಶೀರ್ಷಿಕೆಯಡಿ ಎರಡು ಬಾರಿ ಬಿಲ್ ಪಾವತಿ ಆಗಿರಬಹುದು. ಹೀಗಾಗಿ, ಎಲ್ಲವನ್ನೂ ಕೂಲಂಕಷವಾಗಿ ಪರಿಶೀಲನೆಗೆ ಒಳಪಡಿಸಬೇಕು’ ಎಂದು ಬಿಬಿಎಂಪಿ ಹಣಕಾಸು ವಿಭಾಗದ ವಿಶೇಷ ಆಯುಕ್ತರಿಗೆ ನೀಡಿರುವ ವರದಿಯಲ್ಲಿ ತಿಳಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.