ಬೆಂಗಳೂರು: ಆನ್ಲೈನ್ ಮೂಲಕ ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾಭ ಬರುವುದಾಗಿ ಹೇಳಿ ನಗರದ ನಿವಾಸಿಯೊಬ್ಬರಿಂದ ₹ 3 ಲಕ್ಷ ಪಡೆದು ವಂಚಿಸಲಾಗಿದ್ದು, ಈ ಸಂಬಂಧ ಕೇಂದ್ರ ವಿಭಾಗದ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

’ಆಸ್ಟಿನ್ಟೌನ್ ನಿವಾಸಿಯಾಗಿರುವ 23 ವರ್ಷದ ವ್ಯಾಪಾರಿ ವಂಚನೆ ಬಗ್ಗೆ ದೂರು ನೀಡಿದ್ದಾರೆ. ಅಪರಿಚಿತರ ವಿರುದ್ಧ ಎಫ್ಐಆರ್ ದಾಖಲಾಗಿದೆ’ ಎಂದು ಪೊಲೀಸರು ಹೇಳಿದರು.

‘ದೂರುದಾರರಿಗೆ ಫೇಸ್ಬುಕ್ನಲ್ಲಿ ಸಂದೇಶ ಕಳುಹಿಸಿದ್ದ ವಂಚಕ, ‘ಸಿಜೆಸಿ ಮಾರ್ಕೆಟ್ಸ್ ಜಾಲತಾಣದ ಮೂಲಕ ಅಂತರರಾಷ್ಟ್ರೀಯ ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ, ದುಪ್ಪಟ್ಟು ಲಾಭ ಬರುತ್ತದೆ’ ಎಂದಿದ್ದರು. ಅದಕ್ಕೆ ಪ್ರತಿಕ್ರಿಯಿಸಿದ್ದ ದೂರುದಾರ, ವಾಟ್ಸ್ಆ್ಯಪ್ ಮೂಲಕ ವೈಯಕ್ತಿಕ ಮಾಹಿತಿ ಹಂಚಿಕೊಂಡಿದ್ದರು.’

‘ಆರೋಪಿ ಮಾತು ನಂಬಿದ್ದ ದೂರುದಾರ, ಆತ ಹೇಳಿದ್ದ ಬ್ಯಾಂಕ್ ಖಾತೆಗಳಿಗೆ ಹಂತ ಹಂತವಾಗಿ ₹ 3 ಲಕ್ಷ ಹಾಕಿದ್ದರು. ಅದಾದ ಕೆಲ ದಿನಗಳ ನಂತರ ಆರೋಪಿ ನಾಪತ್ತೆಯಾಗಿದ್ದಾನೆ’ ಎಂದೂ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.