ಗುರುವಾರ , ಜನವರಿ 21, 2021
27 °C

ರೌಡಿ ‘ಗುಂಡ’ನಿಗೆ ಪೊಲೀಸರಿಂದ ಗುಂಡೇಟು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಸುಲಿಗೆ, ಜೀವ‌ ಬೆದರಿಕೆ ಸೇರಿದಂತೆ ಹಲವು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ ರೌಡಿ ಕಾರ್ತಿಕ್ ಅಲಿಯಾಸ್ ಗುಂಡನಿಗೆ (21) ಗುಂಡು ಹಾರಿಸಿ ನಂದಿನಿ ಬಡಾವಣೆ ಪೊಲೀಸರು ಬುಧವಾರ ತಡರಾತ್ರಿ ಬಂಧಿಸಿದ್ದಾರೆ.

ಕಳೆದ ಭಾನುವಾರ ರಾತ್ರಿ ಮೂರು ಸರಣಿ ಸುಲಿಗೆ ಪ್ರಕರಣಗಳು ನಡೆದಿದ್ದವು. ಇಬ್ಬರು ಸೇರಿಕೊಂಡು ಅಮಾಯಕರಿಗೆ ಚಾಕು ತೋರಿಸಿ, ಸುಲಿಗೆ ಮಾಡಿದ್ದರು. ಇದರಲ್ಲಿ ಭಾಗಿಯಾಗಿದ್ದ ಬದ್ರಿ ಎಂಬ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಗುಂಡನ ಬಗ್ಗೆ ಮಾಹಿತಿ ಸಿಕ್ಕಿತ್ತು.

ತಲೆಮರೆಸಿಕೊಂಡಿದ್ದ ಗುಂಡ ಇಲ್ಲಿನ ಓಕಳೀಪುರದ ಬಳಿ ಬುಧವಾರ ರಾತ್ರಿ ಕಾಣಿಸಿಕೊಂಡಿದ್ದ. ಈ ಬಗ್ಗೆ ಮಾಹಿತಿ ಬರುತ್ತಿದ್ದಂತೆ ಪೊಲೀಸರ ತಂಡ ಸ್ಥಳಕ್ಕೆ ತೆರಳಿ, ಆರೋಪಿಯನ್ನು ಬಂಧಿಸಲು ಮುಂದಾಗಿತ್ತು.

ಈ ವೇಳೆ ಕಾನ್‌ಸ್ಟೆಬಲ್ ಉಮೇಶ್ ಎಂಬುವರ ಮೇಲೆ ಹಲ್ಲೆ ಮಾಡಿದ್ದ ಗುಂಡ, ತಪ್ಪಿಸಿಕೊಳ್ಳಲು ಯತ್ನಿಸಿದ್ದ. ಆಗ ಪಿಎಸ್‌ಐ ನಿತ್ಯಾನಂದಾಚಾರಿ ಅವರು ಆರೋಪಿ ಕಾಲಿಗೆ ಗುಂಡು ಹಾರಿಸಿದರು. ಕುಸಿದು ಬಿದ್ದ ರೌಡಿಯನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದರು.

‘ಆರೋಪಿ ಗುಂಡ ದರೋಡೆ ಹಾಗೂ ಕೊಲೆ ಪ್ರಕರಣಗಳಲ್ಲಿ ಭಾಗಿಯಾಗಿದ್ದು, ಈತ  ಶ್ರೀರಾಂಪುರ ಠಾಣೆಯ ರೌಡಿಶೀಟರ್‌ ಎಂಬ ಮಾಹಿತಿ ಸಿಕ್ಕಿದೆ. ಆರೋಪಿಯ ಆರೋಗ್ಯದಲ್ಲಿ ಚೇತರಿಕೆ‌ ಕಂಡುಬಂದ ನಂತರ ಕಸ್ಟಡಿಗೆ ಪಡೆದು, ವಿಚಾರಣೆ ‌ನಡೆಸಲಾಗುವುದು’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು