ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಹಿತ್ಯದ ವಸ್ತು ಸಂಗ್ರಹಾಲಯ ತೆರೆಯಿರಿ: ಹಿರಿಯ ಲೇಖಕಿ ಲೀಲಾದೇವಿ ಆರ್.ಪ್ರಸಾದ್

ಹಿರಿಯ ಲೇಖಕಿ ಲೀಲಾದೇವಿ ಆರ್.ಪ್ರಸಾದ್ ಸಲಹೆ
Last Updated 3 ಆಗಸ್ಟ್ 2021, 23:08 IST
ಅಕ್ಷರ ಗಾತ್ರ

ಬೆಂಗಳೂರು: ‘ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಕನ್ನಡ ಕವಿಗಳ ಹಾಗೂ ಸಾಹಿತ್ಯಕ್ಕೆ ಸಂಬಂಧಿಸಿದ ವಸ್ತುಸಂಗ್ರಹಾಲಯವನ್ನು ಪ್ರಾರಂಭಿಸಬೇಕು’ ಎಂದುಹಿರಿಯ ಲೇಖಕಿ ಲೀಲಾದೇವಿ ಆರ್.ಪ್ರಸಾದ್ ಸಲಹೆ ನೀಡಿದರು.

ಕನ್ನಡ ಸಾಹಿತ್ಯ ಪರಿಷತ್ತು ಮಂಗಳವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ‘ಪ್ರಾಚೀನ ಕವಿಗಳ ಮತ್ತು ವಚನಕಾರರ ಭಾವಚಿತ್ರ’ಗಳನ್ನು ಅನಾವರಣಗೊಳಿಸಿ ಅವರು ಮಾತನಾಡಿದರು.

ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮನು ಬಳಿಗಾರ್,‘ಆದಿಕವಿ ಪಂಪನಿಂದ ಶಿಶುನಾಳ ಶರೀಫರವರೆಗಿನ ಪ್ರಾಚೀನ ಕವಿಗಳ ಮತ್ತು ವಚನಕಾರರ ಭಾವಚಿತ್ರಗಳು ಇಲ್ಲಿವೆ. ಇವುಗಳನ್ನು ವೀಕ್ಷಿಸಿದರೆ, ಕನ್ನಡ ಸಾಹಿತ್ಯ ಪರಂಪರೆಯ ಅಗಾಧತೆ ಮತ್ತು ಆಶಯಗಳ ಅರಿವಾಗುತ್ತದೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT