ಭಾನುವಾರ, 10 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು | ವೈಟ್‌ಫೀಲ್ಡ್‌ನಲ್ಲಿ ಆಸ್ಟರ್ ಆಸ್ಪತ್ರೆ ಕಾರ್ಯಾರಂಭ

Published 31 ಅಕ್ಟೋಬರ್ 2023, 16:29 IST
Last Updated 31 ಅಕ್ಟೋಬರ್ 2023, 16:29 IST
ಅಕ್ಷರ ಗಾತ್ರ

ಬೆಂಗಳೂರು: ಆಸ್ಟರ್ ಡಿಎಂ ಹೆಲ್ತ್‌ಕೇರ್ ಸಂಸ್ಥೆಯು ನಗರದ ವೈಟ್‌ಫೀಲ್ಡ್‌ನಲ್ಲಿ ನಿರ್ಮಿಸಿರುವ 506 ಹಾಸಿಗೆಗಳ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಮಂಗಳವಾರ ಚಾಲನೆ ದೊರೆತಿದೆ. 

ನಗರದಲ್ಲಿ ಕಾರ್ಯಾರಂಭಿಸಿದ ಸಂಸ್ಥೆಯ ಮೂರನೇ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಇದಾಗಿದೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ನೂತನ ಆಸ್ಪತ್ರೆಯನ್ನು ಉದ್ಘಾಟಿಸಿದರು. 

ಸಮಾರಂಭದಲ್ಲಿ ಆಸ್ಪತ್ರೆಯ ವಿಶೇಷತೆ ಬಗ್ಗೆ ಮಾತನಾಡಿದ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಡಾ.ಆಜಾದ್ ಮೂಪೆನ್, ‘ಗುಣಮಟ್ಟದ ವೈದ್ಯಕೀಯ ಚಿಕಿತ್ಸೆ ಒದಗಿಸುವುದು ನಮ್ಮ ಆದ್ಯತೆಯಾಗಿದೆ. ಕ್ಯಾನ್ಸರ್, ಹೃದ್ರೋಗ ಸೇರಿ ವಿವಿಧ ಕಾಯಿಲೆಗಳಿಗೆ ಇಲ್ಲಿ ಚಿಕಿತ್ಸೆ ಒದಗಿಸಲಾಗುತ್ತದೆ. ಕ್ಯಾನ್ಸರ್‌ನ ನಿಖರ ಚಿಕಿತ್ಸೆ ಇಂಟ್ರಾ ಆಪರೇಟಿವ್ ಎಲೆಕ್ಟ್ರಾನ್ ರೇಡಿಯೇಷನ್ ಥೆರಪಿಯನ್ನು ಈ ಆಸ್ಪತ್ರೆಯಲ್ಲಿ ಅಳವಡಿಸಿಕೊಳ್ಳಲಾಗಿದೆ. ಒಂದೇ ಸೂರಿನಡಿ ವಿವಿಧ ವಿಭಾಗಗಳು ಕಾರ್ಯನಿರ್ವಹಿಸಲಿದ್ದು, ಅತ್ಯಾಧುನಿಕ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳಲಾಗಿದೆ’ ಎಂದು ಹೇಳಿದರು. 

ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ನಿತಿನ್ ಶೆಟ್ಟಿ, ‘ಪರಿಣತಿ ಹೊಂದಿದ ವೈದ್ಯರ ತಂಡವನ್ನು ಆಸ್ಪತ್ರೆ ಹೊಂದಿದೆ. ವಿಶ್ವದರ್ಜೆಯ ಚಿಕಿತ್ಸೆಯನ್ನು ರೋಗಿಗಳಿಗೆ ಒದಗಿಸಲಾಗುತ್ತದೆ. ಸಮಗ್ರ ಆರೋಗ್ಯ ಅನುಭವವನ್ನು ಈ ಆಸ್ಪತ್ರೆ ನೀಡಲಿದೆ’ ಎಂದು ತಿಳಿಸಿದರು.  

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT