ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೃಷಿ ವಿವಿ: ಆನ್‍ಲೈನ್ ಪರೀಕ್ಷೆಗೆ ವಿರೋಧ

Last Updated 8 ಆಗಸ್ಟ್ 2020, 0:31 IST
ಅಕ್ಷರ ಗಾತ್ರ

ಬೆಂಗಳೂರು: ಕೃಷಿ ವಿಶ್ವವಿದ್ಯಾಲಯಗಳಲ್ಲಿ ಆನ್‍ಲೈನ್ ಪರೀಕ್ಷೆಗಳನ್ನು ನಡೆಸಬಾರದು ಎಂದು ಒತ್ತಾಯಿಸಿ ರಾಜ್ಯದಾದ್ಯಂತ ಇರುವ ಕೃಷಿ ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳು ಶುಕ್ರವಾರ ಪ್ರತಿಭಟನೆ ನಡೆಸಿದರು.

ಕೃಷಿ ವಿಜ್ಞಾನ ವಿಶ್ವವಿದ್ಯಾಲಯಗಳ ಹೋರಾಟ ಸಮಿತಿ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಯಿತು.

'ರಾಜ್ಯದಲ್ಲಿರುವ ಕೃಷಿ ವಿಜ್ಞಾನ (ಕೃಷಿ, ತೋಟಗಾರಿಕೆ, ಪಶು ಸಂಗೋಪನೆ, ರೇಷ್ಮೆ ಸಾಕಾಣಿಕೆ) ವಿದ್ಯಾಲಯಗಳು ಆನ್‍ಲೈನ್ ತರಗತಿಗಳ ಆಧಾರದ ಮೇಲೆ ಪರೀಕ್ಷೆ ನಡೆಸಲು ಮುಂದಾಗಿವೆ. ಇದು ವಿದ್ಯಾರ್ಥಿಗಳ ಭವಿಷ್ಯಕ್ಕೆ ಮಾರಕವಾಗಲಿದೆ’ ಎಂದು ಸಮಿತಿಯ ರಾಜ್ಯ ಸಂಚಾಲಕ ಸುಭಾಷ್ ಕಳವಳ ವ್ಯಕ್ತಪಡಿಸಿದರು.

'ಲಾಕ್‍ಡೌನ್ ಅವಧಿಯಲ್ಲಿ ತಾಂತ್ರಿಕ ಸಮಸ್ಯೆಗಳಿಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಆನ್‍ಲೈನ್ ತರಗತಿಗಳಲ್ಲಿ ಭಾಗವಹಿಸಲು ಸಾಧ್ಯವಾಗಿಲ್ಲ. ವಿದ್ಯಾರ್ಥಿಗಳು ಆನ್‍ಲೈನ್ ತರಗತಿಗಳಿಂದ ಪ್ರಾಯೋಗಿಕ ಅನುಭವ ಸಿಗುವುದಿಲ್ಲ. ಈ ಕಾರಣಕ್ಕೆ ಹಲವು ಕೋರ್ಸ್‍ಗಳ ಪರೀಕ್ಷೆ ರದ್ದು ಮಾಡಲಾಗಿದೆ‘.

’ಕೃಷಿ ವಿಶ್ವವಿದ್ಯಾಲಯಗಳು ಯಾವ ಕಾರಣಕ್ಕೂ ಆನ್‍ಲೈನ್ ಪರೀಕ್ಷೆಗಳನ್ನು ನಡೆಸಬಾರದು. ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಣ ತಜ್ಞರ ಅಭಿಪ್ರಾಯದ ಮೇರೆಗೆ ತಾರತಮ್ಯವಿಲ್ಲದ ವೈಜ್ಞಾನಿಕ ಮೌಲ್ಯಮಾಪನ ಪ್ರಕ್ರಿಯೆ ಅಳವಡಿಸಬೇಕು' ಎಂದು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT