ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಯ ರಸ್ತೆಗಳ ಬದಿ ಹಾಗೂ ವಿಭಜಕಗಳಲ್ಲಿರುವ ಗಿಡಗಳನ್ನು ಸೂಕ್ತವಾಗಿ ನಿರ್ವಹಣೆ ಮಾಡಬೇಕು ಎಂದು ನಗರಾಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದೆ.

ರಸ್ತೆ ಬದಿ ಹಾಗೂ ವಿಭಜಕಗಳಲ್ಲಿ ಬೆಳೆಸಲಾಗಿರುವ ಆಲಂಕಾರಿಕ ಗಿಡಗಳನ್ನು ಸರಿಯಾಗಿ ಪೋಷಣೆ ಮಾಡಿ, ಅವಕಾಶವಿರುವ ಕಡೆ ಹೊಸದಾಗಿ ಆಲಂಕಾರಿಕ ಗಿಡ, ಮರಗಳನ್ನು ಬೆಳೆಸಬೇಕು. ಈಗಾಗಲೇ ಒಣಗಿ ಬಿದ್ದಿರುವ ಕಸವನ್ನು ತೆಗೆದು ಸ್ವಚ್ಛಗೊಳಿಸಬೇಕು. ಈ ಬಗ್ಗೆ ಜಿಬಿಎ ಮುಖ್ಯ ಆಯುಕ್ತರು ಹಾಗೂ ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯವರು ನಿಯಮಿತವಾಗಿ ಸಭೆ ನಡೆಸಿ, ಪರಿಶೀಲನೆ ನಡೆಸಬೇಕು ಎಂದು ಆದೇಶದಲ್ಲಿ ಸೂಚಿಸಲಾಗಿದೆ.

ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಫೆಬ್ರುವರಿ 26ರಂದು ಪತ್ರ ಬರೆದು ರಸ್ತೆ ಬದಿ ಹಾಗೂ ವಿಭಜಕಗಳಲ್ಲಿ ನೆಡಲಾಗಿದ್ದ ಗಿಡಗಳನ್ನು ನಿರ್ವಹಣೆ ಮಾಡಬೇಕು. ಕಸವನ್ನು ತೆರವು ಮಾಡಬೇಕು ಎಂದು ಸೂಚಿಸಿದ್ದರು. ಅದರಂತೆ, ನಗರಾಭಿವೃದ್ಧಿ ಇಲಾಖೆ ಮಾರ್ಚ್ 2ರಂದು ಆದೇಶ ಹೊರಡಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.