ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಗಾಂಗ ದಾನ: ಆರು ಮಂದಿಗೆ ನೆರವಾದ ವಿದೇಶಿ ಮಹಿಳೆ

Published 20 ಮೇ 2023, 19:22 IST
Last Updated 20 ಮೇ 2023, 19:22 IST
ಅಕ್ಷರ ಗಾತ್ರ

ಬೆಂಗಳೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡು ಮಿದುಳು ನಿಷ್ಕ್ರಿಯವಾಗಿದ್ದ 40 ವರ್ಷದ ಮಹಿಳೆಯೊಬ್ಬರು ಅಂಗಾಂಗ ದಾನದ ಮೂಲಕ ಆರು ಮಂದಿಗೆ ನೆರವಾಗಿದ್ದಾರೆ. ಅವರನ್ನು ಇಲ್ಲಿನ ಸ್ಪರ್ಶ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಮಿದುಳು ನಿಷ್ಕ್ರಿಯಗೊಂಡಿರುವುದಾಗಿ ವೈದ್ಯರು ಮೇ 15ರಂದು ಘೋಷಿಸಿದರು. ಕುಟುಂಬದ ಸದಸ್ಯರ ಸಮ್ಮತಿ ಆಧರಿಸಿ ಪಿತ್ತಜನಕಾಂಗ, ಎಡ ಮೂತ್ರಪಿಂಡವನ್ನು ರೋಗಿಗಳಿಗೆ ಯಶಸ್ವಿಯಾಗಿ ಕಸಿ ಮಾಡಲಾಗಿದೆ. ಮತ್ತೊಂದು ಮೂತ್ರಪಿಂಡವನ್ನು ಐಎನ್‌ಯು ಆಸ್ಪತ್ರೆ, ಹೃದಯ ಕವಾಟವನ್ನು ನಾರಾಯಣ ಹೃದಯಾಲಯ, ಕಣ್ಣಿನ ಕಾರ್ನಿಯಾವನ್ನು ನಾರಾಯಣ ನೇತ್ರಾಲಯಕ್ಕೆ ಹಾಗೂ ಚರ್ಮವನ್ನು ವಿಕ್ಟೋರಿಯಾದ ಚರ್ಮ ಬ್ಯಾಂಕ್‌ಗೆ ಕಳುಹಿಸಲಾಗಿದೆ.

‘ಅಂಗಾಂಗ ದಾನದಿಂದ ವ್ಯಕ್ತಿಯೊಬ್ಬರ ಜೀವನವನ್ನು ಬದಲಾಯಿಸಬಹುದಾಗಿದ್ದು, ಭಾರತಕ್ಕೆ ಭೇಟಿ ನೀಡಿದ್ದ ವಿದೇಶಿ ಮಹಿಳೆಯೊಬ್ಬರು ದುರದೃಷ್ಟವಶಾತ್ ನಿಧನರಾದರು. ಆ ನೋವಿನಲ್ಲಿ ಕುಟುಂಬದ ಸದಸ್ಯರು ಅವರ ಅಂಗಾಂಗ ದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ’ ಎಂದು ಎಂದು ಸ್ಪರ್ಶ್ ಆಸ್ಪತ್ರೆ ಸಮೂಹದ ಮುಖ್ಯ ಕಾರ್ಯಾಚರಣೆ ಅಧಿಕಾರಿ ಜೋಸೆಫ್ ಪಸಂಘ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT