ಬೆಂಗಳೂರು: ‘ತೋಟಗಾರಿಕೆ ಇಲಾಖೆ, ಜೈವಿಕ್ ಕೃಷಿಕ್ ಸೊಸೈಟಿಯ ಸಹಯೋಗದಲ್ಲಿ ಮೇ 23ರಿಂದ 25ರವರೆಗೆ ಲಾಲ್ಬಾಗ್ನ ಡಾ.ಎಂ.ಎಚ್. ಮರೀಗೌಡ ಸಭಾಂಗಣದಲ್ಲಿ ಸಾವಯವ ಮಾವು ಮತ್ತು ಹಲಸಿನ ಹಬ್ಬವನ್ನು ಆಯೋಜಿಸಲಾಗಿದೆ’ ಎಂದು ತೋಟಗಾರಿಕೆ ಇಲಾಖೆಯ ನಿರ್ದೇಶಕ ಡಿ.ಎಸ್. ರಮೇಶ್ ತಿಳಿಸಿದರು.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮೇ 23ರಂದು ಮಧ್ಯಾಹ್ನ 3ಕ್ಕೆ ತೋಟಗಾರಿಕೆ ಇಲಾಖೆಯ ಕಾರ್ಯದರ್ಶಿ ಶಮ್ಲಾ ಇಕ್ಬಾಲ್ ಅವರು ಈ ಹಬ್ಬವನ್ನು ಉದ್ಘಾಟಿಸಲಿದ್ದಾರೆ. ಪ್ರತಿದಿನ ಬೆಳಿಗ್ಗೆ 7ರಿಂದ ಸಂಜೆ 6ಗಂಟೆಯವರೆಗೆ ವಿವಿಧ ತಳಿಯ ಮಾವು ಮತ್ತು ಹಲಸಿನ ಹಣ್ಣುಗಳು ಹಾಗೂ ಅವುಗಳ ಮೌಲ್ಯವರ್ಧಿತ ಉತ್ಪನ್ನಗಳ ಮಾರಾಟ, ಪ್ರದರ್ಶನ ಇರಲಿದೆ’ ಎಂದು ತಿಳಿಸಿದರು.

‘ಮಿಯಾಜಾಕಿ ಮಾವಿನ ಹಣ್ಣಿನ ಪ್ರದರ್ಶನ, ಅಪ್ಪೆ ಮಿಡಿ, ಸೇರಿದಂತೆ ವಿವಿಧ ತಳಿಯ ಮಾವಿನ ಹಣ್ಣುಗಳ ಪ್ರದರ್ಶನ ಮತ್ತು ಮಾರಾಟವಿದೆ. ಕೆಂಪು, ಹಳದಿ ಮತ್ತು ಬಿಳಿ ಹಲಸಿನ ತಳಿಯ ಹಣ್ಣುಗಳ ಮಾರಾಟವೂ ಇರಲಿದೆ’ ಎಂದರು.

ಮಾಹಿತಿಗೆ: 81055 79839, 97426 96577.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.