ಕೇಂದ್ರ-ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ: ಸಿಐಟಿಯುನಿಂದ ವಿಧಾನಸೌಧ ಚಲೋ

ಬೆಂಗಳೂರು: ಕಾರ್ಮಿಕರು, ಶ್ರಮಜೀವಿಗಳ ಹಕ್ಕುಗಳ ರಕ್ಷಣೆಗಾಗಿ ಸಿಐಟಿಯು ವಿಧಾನಸೌಧ ಚಲೋ ಹಮ್ಮಿಕೊಂಡಿದೆ.
ನಗರದ ಸ್ವಾತಂತ್ರ್ಯ ಉದ್ಯಾನದ ಬಳಿ ನೂರಾರು ಕಾರ್ಮಿಕರು, ಸಿಐಟಿಯು ಸದಸ್ಯರು ಸೇರಿದ್ದಾರೆ.
ಕೋವಿಡ್ ಪರಿಹಾರ ಮತ್ತು ಪಡಿತರ ಕಿಟ್ ವಿತರಿಸಬೇಕು, ಸಾಮಾಜಿಕ ಭದ್ರತಾ ಯೋಜನೆಗಳ ಜಾರಿ ಮಾಡಬೇಕು, ಕಾರ್ಮಿಕ ವಿರೋಧಿ ತಿದ್ದುಪಡಿಗಳನ್ನು ಬಿಡಬೇಕು ಎಂಬುದು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ವಿಧಾನಸೌಧ ಚಲೋ ಹಮ್ಮಿಕೊಳ್ಳಲಾಗುತ್ತಿದೆ.
ಕಾರ್ಮಿಕ ಸಚಿವರು ಸ್ಥಳಕ್ಕೆ ಬಂದು ಭರವಸೆ ನೀಡುವವರೆಗೆ ಹೋರಾಟ ಮುಂದುವರಿಸಲಾಗುವುದು ಎಂದು ಕಾರ್ಮಿಕ ಮುಖಂಡರು ಹೇಳಿದರು.
ಕೇಂದ್ರ ಮತ್ತು ರಾಜ್ಯಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.