ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಬಿಎಂಪಿ ಶೌಚಾಲಯಗಳ ನಿರ್ವಹಣೆ ಹೊರಗುತ್ತಿಗೆಗೆ !

Published 14 ಆಗಸ್ಟ್ 2023, 0:30 IST
Last Updated 14 ಆಗಸ್ಟ್ 2023, 0:30 IST
ಅಕ್ಷರ ಗಾತ್ರ

ಬೆಂಗಳೂರು: ಹೈಕೋರ್ಟ್‌ ತರಾಟೆಗೆ ತೆಗೆದುಕೊಂಡ ಬಳಿಕ ಎಚ್ಚೆತ್ತುಕೊಂಡಿರುವ ಬಿಬಿಎಂಪಿ ಶೌಚಾಲಯ ನಿರ್ವಹಣೆಯನ್ನು ಹೊರಗುತ್ತಿಗೆಗೆ ನೀಡಲು ಯೋಜನೆ ರೂಪಿಸಿದೆ.

ಸಾರ್ವಜನಿಕ ಶೌಚಾಲಯಗಳ ಬಗ್ಗೆ ನಿಗಾ ವಹಿಸದಿರುವ ಕುರಿತು ಕೆಲವು ದಿನಗಳ ಹಿಂದೆ ಹೈಕೋರ್ಟ್‌ ತರಾಟೆಗೆ ತೆಗೆದುಕೊಂಡಿತ್ತು. ಸಾರ್ವಜನಿಕ ನೈರ್ಮಲ್ಯ ಮತ್ತು ಮೂಲ ಸೌಕರ್ಯಗಳನ್ನು ಬೆಂಗಳೂರು ನಗರದ ನಿವಾಸಿಗಳಿಗೆ ಒದಗಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ. ಮೂರು ವಾರಗಳ ಒಳಗೆ ಬಿಬಿಎಂಪಿ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೈಕೋರ್ಟ್‌ ಹೇಳಿತ್ತು.

169 ಇ–ಶೌಚಾಲಯಗಳ ನಿರ್ವಹಣೆಯನ್ನು ಮೂರು ವರ್ಗಗಳವರೆಗೆ, 34 ಶೌಚಾಲಯಗಳ ನಿರ್ವಹಣೆಯನ್ನು ಎರಡು ವರ್ಷಗಳವರೆಗೆ ಹೊರಗುತ್ತಿಗೆ ನೀಡಲು ಬಿಬಿಪಿಎಂಪಿ ಯೋಜನೆ ರೂಪಿಸಿದೆ. ಖಾಸಗಿ ಏಜೆನ್ಸಿಗೆ ಬಿಬಿಎಂಪಿಯಿಂದಲೇ ನಿರ್ವಹಣಾ ವೆಚ್ಚವನ್ನು ನೀಡಲು ನಿರ್ಧರಿಸಿದೆ. ಶೌಚಾಲಯಗಳ ಮೇಲೆ ಯಾವುದೇ ಜಾಹೀರಾತು ಪ್ರಕಟಿಸುವ ಹಕ್ಕುಗಳನ್ನು ನೀಡಲಾಗುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶೇ 90ರಷ್ಟು ಕೊರತೆ: ಕೇಂದ್ರ ಸರ್ಕಾರ ಹೊರಡಿಸಿರುವ ಮಾರ್ಗಸೂಚಿ ಪ್ರಕಾರ ಪ್ರಸ್ತುತ ಜನಸಂಖ್ಯೆಗೆ ಅನುಗುಣವಾಗಿ ಬೆಂಗಳೂರಿನಲ್ಲಿ ಕನಿಷ್ಠ 20,000 ಮೂತ್ರಾಲಯಗಳು ಮತ್ತು 15,000 ಸಾರ್ವಜನಿಕ ಶೌಚಾಲಯಗಳು ಇರಬೇಕು. ನಗರದಲ್ಲಿ ಶೇ 10ರಷ್ಟು ಮಾತ್ರ ಶೌಚಾಲಯ, ಮೂತ್ರಾಲಯಗಳಿದ್ದು, ಶೇ 90ರಷ್ಟು ಕೊರತೆ ಇದೆ. 

ಹಲವು ಕಡೆಗಳಲ್ಲಿ ಉತ್ತಮ ಶೌಚಾಲಯವನ್ನು ನಿರ್ಮಿಸಲಾಗಿದ್ದರೂ ಅವು ನಿರ್ವಹಣೆ ಇಲ್ಲದ ಕಾರಣ ಸಾರ್ವಜನಿಕರು ಬಳಸುವ ಸ್ಥಿತಿಯಲ್ಲಿಲ್ಲ. ಸ್ವಚ್ಛತೆಗೆ ಬಿಬಿಎಂಪಿ ಆದ್ಯತೆ ನೀಡುತ್ತಿಲ್ಲ ಎಂದು ಬಳಕೆದಾರರು ದೂರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT