ಶನಿವಾರ, 10 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹100 ಕೋಟಿಗೂ ಹೆಚ್ಚು ಅನುದಾನಿತ ಕಾರ್ಯಕ್ರಮ- ಕಡ್ಡಾಯ ಮೌಲ್ಯಮಾಪನಕ್ಕೆ ಸಿಎಂ ಸೂಚನೆ

Last Updated 20 ಜುಲೈ 2021, 10:02 IST
ಅಕ್ಷರ ಗಾತ್ರ

ಬೆಂಗಳೂರು: ಇನ್ನು ಮುಂದೆ ₹100 ಕೋಟಿಗಿಂತ ಹೆಚ್ಚು ಅನುದಾನವಿರುವ ಕಾರ್ಯಕ್ರಮಗಳನ್ನು ಕಡ್ಡಾಯವಾಗಿ ಮೌಲ್ಯಮಾಪನ ಮಾಡಲು ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸೂಚನೆ ನೀಡಿದ್ದಾರೆ.

ಸಭೆಯ ಬಳಿಕ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಸುದ್ದಿಗೋಷ್ಠಿಯಲ್ಲಿ ಈ ಕುರಿತು ವಿವರ ನೀಡಿದರು.

ಕಳೆದ ಆಯವ್ಯಯ ಭಾಷಣದಲ್ಲಿ ಈ ವಿಷಯವನ್ನು ಘೋಷಿಸಲಾಗಿತ್ತು. ಮೌಲ್ಯಮಾಪನವನ್ನು ಕರ್ನಾಟಕ ಮೌಲ್ಯ ಮಾಪನ ಪ್ರಾಧಿಕಾರದಿಂದಲೇ ನಡೆಸಲಾಗುವುದು ಎಂದು ಹೇಳಿದರು.

ಇಂದಿನ ಸಭೆಯಲ್ಲಿ 11 ಪ್ರಮುಖ ಕೇಂದ್ರ ಪುರಸ್ಕೃತ ಕಾರ್ಯಕ್ರಮಗಳ ಪ್ರಗತಿಯ ಪರಿಶೀಲನೆ ನಡೆಸಲಾಯಿತು. 24 ವಿವಿಧ ಇಲಾಖೆಗಳಲ್ಲಿ 96 ವಿವಿಧ ಕೇಂದ್ರ ಪುರಸ್ಕೃತ ಯೋಜನೆಗಳು ಅನುಷ್ಠಾನದಲ್ಲಿವೆ. 2020–21 ನೇ ಸಾಲಿನಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳ ಒಟ್ಟು ಅನುದಾನ ₹39,601 ಕೋಟಿಗಳಾಗಿದ್ದು, ಇದರಲ್ಲಿ ಕೇಂದ್ರದ ಪಾಲು ₹18,715 ಕೋಟಿ ಇದ್ದು, 2021 ರ ಮಾರ್ಚ್‌ ಅಂತ್ಯಕ್ಕೆ ₹16,320 ಕೋಟಿ ಬಿಡುಗಡೆಯಾಗಿದೆ ಎಂದು ಹೇಳಿದರು.

2021–22 ನೇ ಸಾಲಿನಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳಲ್ಲಿ ಒಟ್ಟು ಅನುದಾನ ₹38,078 ಕೋಟಿಗಳಾಗಿದ್ದು, ಇದರಲ್ಲಿ ಕೇಂದ್ರದ ಪಾಲು ₹17,536 ಕೋಟಿ ಆಗಿದ್ದು, ಜೂನ್‌ ಅಂತ್ಯಕ್ಕೆ ₹4074 ಕೋಟಿ ಬಿಡುಗಡೆಯಾಗಿದೆ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT