ಬೆಂಗಳೂರು:ಹೊಸ ವರ್ಷಾಚರಣೆಗೆ ಪೂರೈಸಲು ಸಂಗ್ರಹಿಸಿದ್ದ ₹ 6.31 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿರುವ ಪೊಲೀಸರು, ಎಂಟು ಆರೋಪಿಗಳನ್ನು ಬಂಧಿಸಿದ್ದಾರೆ.

‘ಡ್ರಗ್ಸ್ ಸಾಗಣೆ ಹಾಗೂ ಮಾರಾಟದ ಮೇಲೆ ನಿಗಾ ವಹಿಸಲಾಗಿದೆ. ಗೋವಾ, ದೆಹಲಿ, ಆಂಧ್ರಪ್ರದೇಶ, ಹೈದರಾಬಾದ್‌ನಿಂದ ನಗರಕ್ಕೆ ಡ್ರಗ್ಸ್ ತಂದು ಸಂಗ್ರಹಿಸಿದ್ದ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಲಾಯಿತು. ಇಬ್ಬರು ವಿದೇಶಿಗರು ಹಾಗೂ ಆರು ಸ್ಥಳೀಯರನ್ನು ಬಂಧಿಸಲಾಗಿದೆ’ ಎಂದು ಕಮಿಷನರ್ ಪ್ರತಾಪ್ ರೆಡ್ಡಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

‘ಬಾಣಸವಾಡಿ, ಎಲೆಕ್ಟ್ರಾನಿಕ್ ಸಿಟಿ ಠಾಣೆಗಳಲ್ಲಿ ಪ್ರಕರಣ ದಾಖಲಿಸಲಾಗಿದೆ. ಎಂಡಿಎಂಎ, ಎಕ್ಸ್‌ಟೆಸ್ಸಿ, ಹಶೀಸ್ ಎಣ್ಣೆ, ಚರಸ್ ಹಾಗೂ ಗಾಂಜಾ ಜಪ್ತಿ ಮಾಡಲಾಗಿದೆ’ ಎಂದು ತಿಳಿಸಿದರು.

ಹೊಸ ವರ್ಷಾಚರಣೆಗೆ ಬೆಂಗಳೂರು ಸಜ್ಜು
2022ಕ್ಕೆ ವಿದಾಯ ಹೇಳಿ, 2023 ಹೊಸ ವರ್ಷವನ್ನು ಬರಮಾಡಿಕೊಳ್ಳಲು ನಗರ ಸಜ್ಜಾಗಿದೆ. ಪ್ರಮುಖ ರಸ್ತೆಗಳು, ಸಾರ್ವ ಜನಿಕ ಸ್ಥಳಗಳು, ಕ್ಲಬ್, ಹೋಟೆಲ್, ಪಬ್‌ಗಳು ವಿದ್ಯುತ್ ಅಲಂಕೃತಗೊಂಡು ಕಂಗೊಳಿಸುತ್ತಿವೆ.

ಕೋವಿಡ್ ಕಾರಣದಿಂದ ಎರಡು ವರ್ಷ ಹೊಸ ವರ್ಷಾಚರಣೆಗೆ ನಿರ್ಬಂಧ ವಿಧಿಸಲಾಗಿತ್ತು. ಈ ವರ್ಷ ಸಾರ್ವಜನಿಕ ಸ್ಥಳಗಳಲ್ಲಿ ಹೊಸ ವರ್ಷಾಚರಣೆಗೆ ಅವಕಾಶ ನೀಡಲಾಗಿದ್ದು, ತಮ್ಮಿಷ್ಟದ ರೀತಿಯಲ್ಲಿ ಹೊಸ ವರ್ಷವನ್ನು ಸ್ವಾಗತಿಸಲು ಜನರು ಸಿದ್ಧರಾಗಿದ್ದಾರೆ.

ಹೆಚ್ಚು ಜನರು ಸೇರುವ ಬ್ರಿಗೇಡ್ ರಸ್ತೆ, ಎಂ.ಜಿ.ರಸ್ತೆ, ಚರ್ಚ್ ಸ್ಟ್ರೀಟ್, ಕೋರಮಂಗಲ, ಇಂದಿರಾನಗರ, ವೈಟ್‌ಫೀಲ್ಡ್ ಪ್ರದೇಶಗಳಲ್ಲಿ ಸಿದ್ಧತೆ ಜೋರಾಗಿದೆ. ವ್ಯಾಪಾರ ಮಳಿಗೆಗಳು, ಹೋಟೆಲ್, ಪಬ್‌ಗಳಿಗೆ ವಿಶೇಷ ವಿದ್ಯುತ್ ಅಲಂಕಾರ ಮಾಡಲಾಗಿದೆ. ಗ್ರಾಹಕರನ್ನು ಸೆಳೆಯಲು ವಿಶೇಷ ರಿಯಾಯಿತಿ ಜೊತೆಯಲ್ಲಿ ಸಂಗೀತ, ನೃತ್ಯ ಹಾಗೂ ಇತರೆ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಮುಂಗಡ ಟಿಕೆಟ್ ಮಾರಾಟ ನಡೆಯುತ್ತಿದೆ.

ಹೊಸ ವರ್ಷಾಚರಣೆ ಮುನ್ನಾ ದಿನ ಶುಕ್ರವಾರ ರಾತ್ರಿಯೂ ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆಗಳಲ್ಲಿ ಹೆಚ್ಚು ಜನಸಂದಣಿ ಕಂಡುಬಂತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.