ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಡೆಂಗಿ ನಿಯಂತ್ರಣಕ್ಕೆ ‘ಓವಿ ಟ್ರ್ಯಾಫ್‌’

Published 26 ಆಗಸ್ಟ್ 2024, 15:47 IST
Last Updated 26 ಆಗಸ್ಟ್ 2024, 15:47 IST
ಅಕ್ಷರ ಗಾತ್ರ

ಬೆಂಗಳೂರು: ಡೆಂಗಿ, ಮಲೇರಿಯಾ ನಿಯಂತ್ರಣಕ್ಕಾಗಿ ಈಡಿಸ್‌ ಸೊಳ್ಳೆಗಳನ್ನು ಆಕರ್ಷಿಸಿ ನಾಶಪಡಿಸುವ ಓವಿ ಟ್ರ್ಯಾಪ್‌ ಸಾಧನಗಳಿಗೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಅವರು ಸೋಮವಾರ ಗೋಪಾಲಪುರದಲ್ಲಿ ಚಾಲನೆ ನೀಡಿದರು.

ದಿನೇಶ್‌ ಗುಂಡೂರಾವ್‌ ಮಾತನಾಡಿ, ‘ಓವಿ ಟ್ರ್ಯಾಪ್ ಬಯೋ ಸಾಧನವಾಗಿದ್ದು, ಈಡಿಸ್ ಸೊಳ್ಳೆಗಳನ್ನು ಆಕರ್ಷಿಸಿ ನಾಶಪಡಿಸುತ್ತದೆ. ಸೊಳ್ಳೆ ಹೆಚ್ಚಿರುವ ಪ್ರದೇಶಗಳಲ್ಲಿ ಈ ಸಾಧನ ಅಳವಡಿಸುವ ಮೂಲಕ ಡೆಂಗಿ ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ಬಿಬಿಎಂಪಿ ಹಾಗೂ ಆರೋಗ್ಯ ಇಲಾಖೆ ಜಂಟಿಯಾಗಿ ಯೋಜನೆ ರೂಪಿಸಿವೆ. ಪ್ರಾಯೋಗಿಕವಾಗಿ ಗೋಪಾಲಪುರದಲ್ಲಿ 120 ಓವಿ ಟ್ರ್ಯಾಪ್ ಸಾಧನಗಳನ್ನು ಮನೆಗಳಿಗೆ ಅಳವಡಿಸಲಾಗಿದೆ’ ಎಂದು ಮಾಹಿತಿ ನೀಡಿದರು.

ಮುಂಬೈಯ ಧಾರಾವಿ ಕೊಳೆಗೇರಿ ಪ್ರದೇಶಗಳಲ್ಲಿಯೂ ಈ ಪ್ರಯೋಗ ನಡೆಯುತ್ತಿದೆ. ಅದೇ ರೀತಿ ಬೆಂಗಳೂರಿನಲ್ಲೂ ಪ್ರಯೋಗ ಆರಂಭಿಸಲಾಗಿದೆ. ಉತ್ತಮ ಫಲಿತಾಂಶ ದೊರೆತರೆ ರಾಜ್ಯದಾದ್ಯಂತ ಓವಿ ಟ್ರ್ಯಾಪ್ ಸಾಧನಗಳನ್ನು ಅಳವಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಬಯೋ ಟ್ರ್ಯಾಪ್: ಇದೊಂದು ಮಡಿಕೆ ಆಕಾರದ ಸಾಧನ. ಕುಂಡದಲ್ಲಿ ನೀರು ತುಂಬಿ ರಾಸಾಯನಿಕ ಬೆರಸಲಾಗುತ್ತದೆ. ರಾಸಾಯನಿಕ ಮಿಶ್ರಣ ಸೊಳ್ಳೆಗಳನ್ನು ಆಕರ್ಷಿಸುತ್ತದೆ. ಈಡಿಸ್ ಸೊಳ್ಳೆಗಳು ಹಾಗೂ ಅವುಗಳ ಮೊಟ್ಟೆಗಳನ್ನು ನಾಶಪಡಿಸುತ್ತದೆ. ಜೈವಿಕ ಟ್ರ್ಯಾಪ್ ಬಳಕೆಯಿಂದ ಶೇ 60ರಷ್ಟು ಸೊಳ್ಳೆಗಳ ನಿಯಂತ್ರಿಸಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT