ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಹನಗಳ ಜಪ್ತಿ: ಬಿಡಿಸಿಕೊಳ್ಳಲು ಬಾರದ ಮಾಲೀಕರು

Last Updated 16 ಮೇ 2020, 11:42 IST
ಅಕ್ಷರ ಗಾತ್ರ

ಬೆಂಗಳೂರು: ಲಾಕ್‌ಡೌನ್ ಹಾಗೂ ನಿಷೇಧಾಜ್ಞೆ ಜಾರಿಯಲ್ಲಿದ್ದ ವೇಳೆಯಲ್ಲಿ ಜಪ್ತಿ ಮಾಡಲಾದ ವಾಹನಗಳನ್ನು ಬಿಡಿಸಿಕೊಳ್ಳಲು ಮಾಲೀಕರು ಠಾಣೆಗೆ ಬರುತ್ತಿಲ್ಲ. ಇದರಿಂದಾಗಿ, ಠಾಣೆ ಎದುರೇ ವಾಹನಗಳನ್ನು ಅನಾಥವಾಗಿ ನಿಲ್ಲಿಸಲಾಗಿದೆ.

ಕೊರೊನಾ ವೈರಾಣು ಹರಡುವಿಕೆ ತಡೆಯುವ ಉದ್ದೇಶದಿಂದ ಲಾಕ್‌ಡೌನ್ ಮಾಡಲಾಗಿತ್ತು. ಅನಗತ್ಯವಾಗಿ ಹಾಗೂ ಪಾಸ್‌ ಇಲ್ಲದೇ ಸಂಚರಿಸುತ್ತಿದ್ದ ವಾಹನಗಳನ್ನು ಪೊಲೀಸರು ಜಪ್ತಿ ಮಾಡಿದ್ದರು.

ಜಪ್ತಿ ಮಾಡಿದ್ದ ವಾಹನಗಳನ್ನು ದಂಡ ಕಟ್ಟಿಸಿಕೊಂಡು ಬಿಡುಗಡೆ ಮಾಡುವಂತೆ ಹೈಕೋರ್ಟ್ ಸಹ ನಿರ್ದೇಶನ ನೀಡಿತ್ತು. ಅದರನ್ವಯ ವಾಹನಗಳ ಬಿಡುಗಡೆ ಪ್ರಕ್ರಿಯೆ ಆರಂಭವಾಗಿದ್ದು, ಸುಮಾರು 10 ಸಾವಿರ ವಾಹನಗಳನ್ನು ಬಿಡಿಸಿಕೊಳ್ಳಲು ಮಾಲೀಕರೇ ಬಂದಿಲ್ಲ.
’47 ಸಾವಿರಕ್ಕೂ ಹೆಚ್ಚು ವಾಹನಗಳನ್ನು ಜಪ್ತಿ ಮಾಡಲಾಗಿತ್ತು. ದಂಡ ಕಟ್ಟಿಸಿಕೊಂಡು ದಾಖಲೆಗಳನ್ನು ಪರಿಶೀಲಿಸಿ ವಾಹನಗಳನ್ನು ಬಿಡುಗಡೆ ಮಾಡಲಾಗುತ್ತಿದೆ. ಆದರೆ, 10 ಸಾವಿರ ವಾಹನಗಳು ಠಾಣೆಯಲ್ಲಿ ಉಳಿದುಕೊಂಡಿವೆ. ಅವುಗಳ ಮಾಲೀಕರು ಯಾರು ಎಂಬುದು ಗೊತ್ತಾಗುತ್ತಿಲ್ಲ’ ಎಂದು ಪೊಲೀಸರು ಹೇಳಿದರು.

‘ಲಾಕ್‌ಡೌನ್‌ ಜಾರಿಯಲ್ಲಿರುವುದರಿಂದ ಕೆಲ ದಿನ ಬಿಟ್ಟು ಮಾಲೀಕರು ಬರುವ ನಿರೀಕ್ಷೆ ಇದೆ. ಜೊತೆಗೆ, ಕೆಲ ವಾಹನಗಳು ಕದ್ದಿದ್ದು ಎಂಬ ಅನುಮಾನವಿದೆ. ನೋಂದಣಿ ಸಂಖ್ಯೆ ಆಧರಿಸಿ ಸಾರಿಗೆ ಇಲಾಖೆ ಅಧಿಕಾರಿಗಳ ಸಹಾಯದಿಂದ ಮಾಲೀಕರನ್ನು ಪತ್ತೆ ಮಾಡಲಾಗುತ್ತಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT