ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಆಮ್ಲಜನಕ ಉತ್ಪಾದಕರು ಮತ್ತು ಸರಬರಾಜುದಾರರ ಸಭೆಯಲ್ಲಿ ಈಗ ಕೇಂದ್ರ ಸರ್ಕಾರವು ಹಂಚಿಕೆ ಮಾಡಿರುವ ಆಮ್ಲಜನಕ ಕೋಟಾದಲ್ಲಿ ಯಾವುದೇ ರೀತಿ ಕಡಿತವಾಗದಂತೆ ಸರಬರಾಜು ಮಾಡಲು ಅಗತ್ಯ ಕ್ರಮ ಕೈಗೊಳ್ಳುವುದು ಸೇರಿದಂತೆ ಅನೇಕ ವಿಚಾರಗಳ ಕುರಿತು ಚರ್ಚಿಸಲಾಯಿತು.

ಸಭೆಯಲ್ಲಿ ಚರ್ಚಿಸಲಾದ ಅಂಶಗಳು

1. ಆಮ್ಲಜನಕ ಟ್ಯಾಂಕರ್ಗಳ ಫಿಲ್ಲಿಂಗ್ ಅವಧಿಯನ್ನು ಕಡಿತಗೊಳಿಸಲು ಕ್ರಮ ಕೈಗೊಳ್ಳುವುದು.

2. ಆಮ್ಲಜನಕ ಟ್ಯಾಂಕರ್ಗಳ ತಡೆರಹಿತ ಪ್ರಯಾಣಕ್ಕಾಗಿ ಗ್ರಿನ್ ಕಾರಿಡಾರ್ಗಳನ್ನು ಒದಗಿಸುವುದು.

3. ಟೋಲ್ಗಳಲ್ಲಿ ಅನಗತ್ಯ ವಿಳಂಬ ತಪ್ಪಿಸಲು ಟೋಲ್ಗಳಿಗೆ ನಿರ್ದೇಶನ ನೀಡುವುದು.

4. ನೈಟ್ರೋಜನ್, ಆರ್ಗನ್ ಅನಿಲಗಳ ಸಾಗಣೆ ಟ್ಯಾಂಕರ್ಗಳನ್ನು ಆಮ್ಲಜನಕ ಸಾಗಣೆಗಾಗಿ ಪರಿವರ್ತಿಸಲು ಕ್ರಮವಹಿಸುವುದು.

5. ತುರ್ತು ಅಗತ್ಯಕ್ಕಾಗಿ ಆಮ್ಲಜನಕ ವಾಹನಗಳ ಚಾಲನೆಗಾಗಿ ಎಲ್ಪಿಜಿ ಟ್ಯಾಂಕರ್ಗಳ ಚಾಲಕರ ಪಟ್ಟಿಯನ್ನು ಸಿದ್ಧಪಡಿಸಿಟ್ಟುಕೊಂಡು ಅಗತ್ಯವಿದ್ದಲ್ಲಿ ಅವರ ಸೇವೆಯನ್ನು ಬಳಸಿಕೊಳ್ಳುವುದು.

6. ಆಮ್ಲಜನಕ ಉತ್ಪಾದಕರು ಮತ್ತು ಸರಬರಾಜುದಾರರು ಆಮ್ಲಜನಕ ಸರಬರಾಜಿಗೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆಗಳಿದ್ದಲ್ಲಿ ನೇರವಾಗಿ ನಿಯೋಜಿಸಲ್ಪಟ್ಟ ಅಧಿಕಾರಿಯನ್ನು ಸಂಪರ್ಕಿಸಿ ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಂಡು ತಡೆರಹಿತವಾಗಿ ಆಮ್ಲಜನಕ ಪೂರೈಕೆ ಮಾಡಲು ಕೋರಲಾಯಿತು.

7. ಲಭ್ಯವಿರುವ ಟ್ಯಾಂಕರ್ಗಳನ್ನು ಗರಿಷ್ಠ ಪ್ರಮಾಣದಲ್ಲಿ ಬಳಸಿಕೊಳ್ಳಲು ಸೂಚಿಸಲಾಯಿತು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.