ಶನಿವಾರ, ಏಪ್ರಿಲ್ 4, 2020
19 °C

₹42.83 ಲಕ್ಷ ಬಾಡಿಗೆ ಬಾಕಿ; ‘ಓಯೊ’ ವಿರುದ್ಧ ಎಫ್‌ಐಆರ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಮೊಬೈಲ್ ಆ್ಯಪ್‌ ಆಧಾರಿತ ಬಾಡಿಗೆ ಕೊಠಡಿ ಸೇವೆ ಒದಗಿಸುತ್ತಿರುವ ‘ಓಯೊ’ ಕಂಪನಿ ₹ 42,83,301 ಬಾಡಿಗೆ ಪಾವತಿಸದೆ ವಂಚಿಸಿದೆ’ ಎಂದು ಆರೋಪಿಸಿ ಸೂರ್ಯಪ್ರಕಾಶ್ ಪೊಕ್ಕಾಲಿ ಎಂಬುವರು ಹಲಸೂರು ಠಾಣೆಗೆ ದೂರು ನೀಡಿದ್ದಾರೆ.

‘12 ಡಿಗ್ರಿ ವೆಸ್ಟ್’ ಹೋಟೆಲ್ ಮಾಲೀಕರಾದ ಸೂರ್ಯಪ್ರಕಾಶ್ ಅವರು ವಂಚನೆ ಸಂಬಂಧ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ನೀಡಿರುವ ನಿರ್ದೇಶನದನ್ವಯ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ಹೋಟೆಲ್ ಕೊಠಡಿ ಕಾಯ್ದಿರಿಸುವ ಸಂಬಂಧ ಓಯೊ ಕಂಪನಿ ಜೊತೆ 2017ರಲ್ಲೇ ಸೂರ್ಯಪ್ರಕಾಶ್ ಒಪ್ಪಂದ ಮಾಡಿಕೊಂಡಿದ್ದರು. ಅಂದಿನಿಂದ ಇಲ್ಲಿಯವರೆಗೂ ಕಂಪನಿಯವರು ಬಾಡಿಗೆ ಪಾವತಿಸಿಲ್ಲ. ಒಳಸಂಚು ನಡೆಸಿ ಆರೋಪಿಗಳು ನಂಬಿಕೆ ದ್ರೋಹ ಹಾಗೂ ಮೋಸ ಮಾಡಿರುವುದಾಗಿ ಸೂರ್ಯಪ್ರಕಾಶ್ ದೂರಿದ್ದಾರೆ’ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

‘ಓಯೊ ಕಂಪನಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರಿತೇಶ್ ಅಗರ್‌ವಾಲ್ ಸೇರಿದಂತೆ ಐವರ ವಿರುದ್ಧ ಎಫ್‌ಐಆರ್‌ ದಾಖಲಿಸಿಕೊಳ್ಳಲಾಗಿದೆ. ನೋಟಿಸ್ ನೀಡಿ ವಿಚಾರಣೆ ನಡೆಸಬೇಕಿದೆ’ ಎಂದು ಮೂಲಗಳು ಹೇಳಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು