ಬುಧವಾರ, ಜೂಲೈ 8, 2020
28 °C

ಪಾದರಾಯನಪುರ ಗಲಭೆ: 126 ಆರೋಪಿಗಳಿಗೆ ಜಾಮೀನು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಪಾದರಾಯನಪುರದಲ್ಲಿ ಕೊರೊನಾ ನಿಯಂತ್ರಣ ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆ ಹಲ್ಲೆ ನಡೆಸಿದ ಪ್ರಕರಣದ ಎಲ್ಲ 126 ಆರೋಪಿಗಳಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಈ ಕುರಿತಂತೆ ಕಾಯ್ದಿರಿಸಿದ್ದ ಆದೇಶವನ್ನು ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹ ಅವರಿದ್ದ ಏಕಸದಸ್ಯ ನ್ಯಾಯಪೀಠ
ಶುಕ್ರವಾರ ಪ್ರಕಟಿಸಿದೆ.

‘ಎಲ್ಲರಿಗೂ ಕೋವಿಡ್-19 ಪರೀಕ್ಷೆ ನಡೆಸಬೇಕು. ಕೊರೊನಾ ಪಾಸಿಟಿವ್ ಇರುವವರ ಮೇಲೆ ನಿಯಮಾನುಸಾರ ಕ್ರಮ ಕೈಗೊಳ್ಳಬೇಕು. ಎಲ್ಲ ಆರೋಪಿಗಳೂ ಕೋವಿಡ್-19ರ ಮಾರ್ಗಸೂಚಿ ಪಾಲಿಸಬೇಕು. ಇಲ್ಲವಾದರೆ ಜಾಮೀನು ರದ್ದುಪಡಿಸಲಾಗುವುದು’ ಎಂದು ನ್ಯಾಯಪೀಠ ತಿಳಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.