ಬೆಂಗಳೂರು: ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ನೌಕರರಿಗೆ ವೇತನ ಸಹಿತ ಹೆರಿಗೆ ರಜೆ ನೀಡಬೇಕು ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಹೇಳಿದ್ದಾರೆ.

ಈ ಬಗ್ಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಪತ್ರ ಬರೆದಿರುವ ಅವರು, ‘ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಮಹಿಳಾ ನೌಕರರು ಹಾಗೂ ಶುಶ್ರೂಷಕರಿಗೆ ಹೆರಿಗೆ ಭತ್ಯೆಯನ್ನೂ ನೀಡುತ್ತಿಲ್ಲ. ಹೆರಿಗೆ ರಜೆ ಮುಗಿಸಿಕೊಂಡು ಕರ್ತವ್ಯ ನಿರ್ವಹಿಸಲು ಬರುವ ಸಿಬ್ಬಂದಿಯನ್ನು ಕೆಲಸಕ್ಕೂ ನೇಮಿಸಿಕೊಳ್ಳುತ್ತಿಲ್ಲ ಎಂದು ಸುವರ್ಣ ಕರ್ನಾಟಕ ಶುಶ್ರೂಷಾಧಿಕಾರಿಗಳ ಸಂಘವು ಆಯೋಗಕ್ಕೆ ಮನವಿ ಸಲ್ಲಿಸಿದೆ. ಮಹಿಳಾ ನೌಕರರಿಗೆ ವೇತನಸಹಿತ ಹೆರಿಗೆ ರಜೆ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗೆ ನಿರ್ದೇಶಿಸಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.