ಬುಧವಾರ, ಡಿಸೆಂಬರ್ 7, 2022
21 °C

ಪಾಕ್ ಪರ ಘೋಷಣೆ: ವಾಕ್ ಸ್ವಾತಂತ್ರ್ಯ ಎತ್ತಿ ಹಿಡಿಯಬೇಕು ಎಂದ ನಟ ಚೇತನ್ ಅಹಿಂಸಾ

ಪ್ರಜಾವಾಣಿ ವೆಬ್‌ಡೆಸ್ಕ್‌‌ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬೆಂಗಳೂರಿನ ಮಾರತ್ತಳ್ಳಿಯ ಕಾಲೇಜೊಂದರ ವಿದ್ಯಾರ್ಥಿಗಳು ಗುರುವಾರ ‘ಪಾಕಿಸ್ತಾನ್ ಜಿಂದಾಬಾದ್’ ಎಂದು  ಘೋಷಣೆ ಕೂಗಿದ್ದಾರೆ ಎಂಬ ಬಗ್ಗೆ ಸುದ್ದಿಯಾಗಿತ್ತು. ಘೋಷಣೆ ಕೂಗುವ ವಿಡಿಯೊ ಕೆಲ ಮಾಧ್ಯಮಗಳಲ್ಲಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ನಂತರ ಪೊಲೀಸರು ದೂರು ದಾಖಲು ಮಾಡುವುದಾಗಿ ಹೇಳಿದ್ದರು.

ಇದೀಗ ಈ ಪ್ರಕರಣದ ಬಗ್ಗೆ ನಟ ಚೇತನ್ ಅಹಿಂಸಾ ಅವರು ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿದ್ದಾರೆ.

‘ನಿನ್ನೆ ನಡೆದ ಕಾಲೇಜು ಫೆಸ್ಟ್‌ನಲ್ಲಿ ಬೆಂಗಳೂರಿನ 3 ವಿದ್ಯಾರ್ಥಿಗಳು 'ಪಾಕಿಸ್ತಾನ್ ಜಿಂದಾಬಾದ್' ಎಂಬ ಘೋಷಣೆಗಳನ್ನು ಕೂಗಿದ್ದಾರೆ. ಇದನ್ನು ವಿನೋದಕ್ಕಾಗಿ ಮಾಡಲಾಗಿದೆ. ಈ ಕಾರಣಕ್ಕಾಗಿ ಆರ್ಯನ್, ರಿಯಾ ಮತ್ತು ದಿನಕರ್ ಅವರನ್ನು ಥಳಿಸಿ ಬೆದರಿಸಿ ಮತ್ತು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಇದು ಅಸಂಬದ್ಧ ಮತ್ತು ಅಪಾಯಕಾರಿ. ಪಾಕಿಸ್ತಾನದ ಜನರು ನಮ್ಮ ಸಹೋದರಿಯರು ಮತ್ತು ಸಹೋದರರು - ನಮ್ಮ ಶತ್ರುಗಳಲ್ಲ. ವಾಕ್ ಸ್ವಾತಂತ್ರ್ಯವನ್ನು ನಾವು ಎತ್ತಿ ಹಿಡಿಯಬೇಕು‘ ಎಂದು ಹೇಳಿದ್ದಾರೆ.

ಕಾಲೇಜಿನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು. ಆ ವೇಳೆ ಘೋಷಣೆ ಕೂಗಲಾಗಿದೆ. ತಮಾಷೆಗಾಗಿ ಈ ರೀತಿ ಮಾಡಿರುವುದಾಗಿ ವಿದ್ಯಾರ್ಥಿಗಳಾದ ರಿಯಾ, ಆರ್ಯನ್, ದಿನಕರ್ ಹೇಳಿಕೊಂಡಿದ್ದಾರೆ ಎಂದು ವರದಿಯಾಗಿತ್ತು.

ವಿಡಿಯೊ ಗಮನಕ್ಕೆ ಬಂದಿದೆ. ದೂರು ದಾಖಲು ಮಾಡುತ್ತೇವೆ ಎಂದು ಪೊಲೀಸರು ತಿಳಿಸಿದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು