ಗುರುವಾರ, 30 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಸ್ತೆ ವಿಸ್ತರಣೆ: ಅರಮನೆ ಮೈದಾನ ಜಾಗ ಬಳಕೆಗೆ ಆದೇಶ

Published 17 ಏಪ್ರಿಲ್ 2024, 21:11 IST
Last Updated 17 ಏಪ್ರಿಲ್ 2024, 21:11 IST
ಅಕ್ಷರ ಗಾತ್ರ

ಬೆಂಗಳೂರು: ರಸ್ತೆ ವಿಸ್ತರಣೆಗಾಗಿ ಬೆಂಗಳೂರು ಅರಮನೆಗೆ ಸೇರಿದ 15.39 ಎಕರೆ ಭೂಮಿಯನ್ನು ಬಳಕೆ ಮಾಡಿಕೊಳ್ಳಲು ತೀರ್ಮಾನಿಸಿರುವುದಾಗಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಸಂಬಂಧ ಮಾರ್ಚ್‌ನಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿತ್ತು. ಈ ಕುರಿತು ಸೋಮವಾರ ಆದೇಶ ಹೊರಡಿಸಲಾಗಿದೆ.

ಬೆಂಗಳೂರು ಅರಮನೆ ಜಾಗದ ಹೊರಭಾಗದಲ್ಲಿ ರಸ್ತೆ ವಿಸ್ತರಣೆ ಮಾಡುವುದಾದರೆ ಟಿಡಿಆರ್‌ (ಅಭಿವೃದ್ಧಿ ಹಕ್ಕುಗಳ ವರ್ಗಾವಣೆ) ಕೊಟ್ಟು ರಸ್ತೆ ಮಾಡಲು ನ್ಯಾಯಾಲಯ ಆದೇಶಿಸಿತ್ತು. ಆ ಬಳಿಕ ಸರ್ಕಾರ ಹಿಂದಕ್ಕೆ ಸರಿಯಿತು. ಮತ್ತೆ ಸರ್ಕಾರ ಭೂಮಿ ವಶಕ್ಕೆ ಪಡೆದು ಕಾಂಪೌಂಡ್‌ ಹಾಕಿತ್ತು. ಇದೀಗ ರಸ್ತೆ ವಿಸ್ತರಣೆಗೆ ಆದೇಶ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT