ಸೋಮವಾರ, ಡಿಸೆಂಬರ್ 5, 2022
19 °C

ಬೆಂಗಳೂರು: ಡ್ರಗ್ಸ್ ಮಾರಲು ಬಂದಿದ್ದ ಪ್ಯಾಲೆಸ್ಟಿನ್ ಪ್ರಜೆ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರದಲ್ಲಿ ಡ್ರಗ್ಸ್ ಮಾರುತ್ತಿದ್ದ ಪಾಲೆಸ್ಟಿನ್ ಪ್ರಜೆ ಹಸನ್ ಹಶೀಮ್ (25) ಎಂಬುವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

‘ಆರೋಪಿ ಹಸನ್, ಸುಡಾನ್ ಪ್ರಜೆಯಿಂದ ಡ್ರಗ್ಸ್ ಖರೀದಿಸಿ ಮಾರುತ್ತಿದ್ದ. ಈತನಿಂದ ₹ 25 ಲಕ್ಷ ಮೌಲ್ಯದ 320 ಗ್ರಾಂ ಎಂಡಿಎಂಎ, ಮೊಬೈಲ್, ತೂಕದ ಯಂತ್ರ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಆರು ವರ್ಷಗಳ ಹಿಂದೆಯಷ್ಟೇ ಬೆಂಗಳೂರಿಗೆ ಬಂದಿದ್ದ ಹಸನ್, ವಿದ್ಯಾಭ್ಯಾಸ ಮುಗಿಸಿಕೊಂಡು ತನ್ನ ದೇಶಕ್ಕೆ ವಾಪಸು ಹೋಗಿದ್ದ. ವಿದ್ಯಾರ್ಥಿ ಆಗಿದ್ದಾಗಲೂ ಆರೋಪಿ ಸಣ್ಣ ಪ್ರಮಾಣದಲ್ಲಿ ಡ್ರಗ್ಸ್ ಮಾರುತ್ತಿದ್ದ. ಅದೇ ಕಾರಣಕ್ಕೆ ಪುನಃ ಬೆಂಗಳೂರಿಗೆ ಬಂದಿದ್ದ ಈತ, ಡ್ರಗ್ಸ್ ಮಾರಾಟವನ್ನೇ ವೃತ್ತಿ ಮಾಡಿಕೊಂಡಿದ್ದ’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು