ಬೆಂಗಳೂರು:ರಾಷ್ಟ್ರೀಯ ಪಲ್ಸ್ ಪೋಲಿಯೊ ಲಸಿಕೆ ಅಭಿಯಾನದ ಅಂಗವಾಗಿ ನಗರದ4,71,593 ಮಕ್ಕಳಿಗೆ ಭಾನುವಾರ ಪೋಲಿಯೊ ಹನಿ ಹಾಕಲಾಗಿದೆ.

ಮೇಯರ್ ಗೌತಮ್ ಕುಮಾರ್ ಹಾಗೂ ಪಾಲಿಕೆ ಆಯುಕ್ತ ಬಿ.ಎಚ್.ಅನಿಲ್ ಕುಮಾರ್ ಹಲಸೂರುಹೆರಿಗೆ ಆಸ್ಪತ್ರೆಯಲ್ಲಿಮಕ್ಕಳಿಗೆ ಲಸಿಕೆ ಹಾಕುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು. ಪಾಲಿಕೆ ವ್ಯಾಪ್ತಿಯಲ್ಲಿಒಟ್ಟು 5,71,125 ಮಕ್ಕಳಿಗೆ ಪೋಲಿಯೊ ಹನಿ ಹಾಕುವ ಗುರಿಯನ್ನು ಹಾಕಿಕೊಳ್ಳಲಾಗಿತ್ತು. ಅದರಲ್ಲಿ ಶೇ82.57 ರಷ್ಟು ಮಕ್ಕಳನ್ನು ತಲುಪುವಲ್ಲಿ ಆರೋಗ್ಯ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.

ಮೆಟ್ರೊ ನಿಲ್ದಾಣ, ಮಾರುಕಟ್ಟೆಗಳು, ಮದುವೆ ಮಂಟಪಗಳಿಗೂ ಕಾರ್ಯಕರ್ತರು ಭೇಟಿ ನೀಡಿ, ಲಸಿಕೆ ಹಾಕಿದರು. ಲಾಲ್ಬಾಗ್ನಲ್ಲಿ ನಡೆಯುತ್ತಿರುವ ಫಲಪುಷ್ಪ ಪ್ರದರ್ಶನಕ್ಕೆ ಬಂದ ಮಕ್ಕಳಿಗೆ ಪೋಲಿಯೊ ಹನಿ ಹಾಕಲು 6 ತಂಡಗಳನ್ನು ನಿಯೋಜನೆ ಮಾಡಲಾಗಿತ್ತು. ಜ.21ರವರೆಗೆ ಲಸಿಕೆ ಕಾರ್ಯಕ್ರಮ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.