ಬುಧವಾರ, ಏಪ್ರಿಲ್ 21, 2021
32 °C

ಪಂಚಮಸಾಲಿ ಮೀಸಲಾತಿ: ಧರಣಿ ಮುಂದುವರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ಪ್ರವರ್ಗ 2ಎ ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿ ಪಂಚಮಸಾಲಿ ಕೂಡಲಸಂಗಮ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ನಡೆಯುತ್ತಿರುವ ಧರಣಿ ಶುಕ್ರವಾರವೂ ಮುಂದುವರಿಯಿತು.

ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಬೆಳಿಗ್ಗೆ 9ಕ್ಕೆ ಪ್ರಾರಂಭವಾದ ಧರಣಿ ಸಂಜೆ 6ರವರೆಗೆ ನಡೆಯಿತು. ‘ಪ್ರವರ್ಗ 2ಎ ಮೀಸಲಾತಿ ಸಿಗುವವರೆಗೂ ಧರಣಿ ನಿಲ್ಲುವುದಿಲ್ಲ. ಮಾ.4ರವರೆಗೆ ಮುಂದುವರಿಯುತ್ತದೆ. ಹಿರಿಯರ ಸಲಹಾ ಸಮಿತಿಯ ಸಲಹೆಯಂತೆ ಮಾ.4ರ ನಂತರ ವಿಭಿನ್ನ ಸ್ವರೂಪದ ಹೋರಾಟ ನಡೆಸಲಾಗುತ್ತದೆ’ ಎಂದು ಸ್ವಾಮೀಜಿ ಪುನರುಚ್ಚರಿಸಿದರು. 

ಬೆಳಿಗ್ಗೆ ಬಸವಣ್ಣನವರು ಹಾಗೂ ಅಕ್ಕಮಹಾದೇವಿ ವಚನಗಳನ್ನು ಹೇಳುವ ಮೂಲಕ ಧರಣಿ ಆರಂಭಿಸಲಾಯಿತು. ಪಂಚಮಸಾಲಿ ಸಮುದಾಯದ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಮುಖಂಡರು ಮಾತನಾಡಿ, ಬೇಡಿಕೆಗೆ ಸ್ಪಂದಿಸದ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ರಾಷ್ಟ್ರಗೀತೆ ಹಾಡಿ ದಿನದ ಧರಣಿಯನ್ನು ಮುಕ್ತಾಯಗೊಳಿಸಲಾಯಿತು.

ಹಾವೇರಿ ಜಿಲ್ಲೆಯ ಪದಾಧಿಕಾರಿಗಳು ಹಾಗೂ ಪಂಚಮಸಾಲಿ ಮುಖಂಡರು ಶುಕ್ರವಾರ ಧರಣಿಯಲ್ಲಿ ಪಾಲ್ಗೊಂಡಿದ್ದರು. ನಿತ್ಯವೂ ಒಂದೊಂದು ಜಿಲ್ಲೆಯ ಮುಖಂಡರು, ಸದಸ್ಯರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಬೆಳಗಾವಿಯ ಸದಸ್ಯರು ಶನಿವಾರ ಧರಣಿ ನಡೆಸಲಿದ್ದಾರೆ.

ಶಾಸಕ ಪಿ.ಟಿ. ಪರಮೇಶ್ವರ್ ನಾಯ್ಕ್ ಹಾಗೂ ಮಾಜಿ ಶಾಸಕ ಕೆ.ಬಿ. ಕೋಳಿವಾಡ ಸೇರಿದಂತೆ ಹಲವು ಮುಖಂಡರು ಧರಣಿ ಸ್ಥಳಕ್ಕೆ ಭೇಟಿ ನೀಡಿದರು.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು