ಸೋಮವಾರ, ಸೆಪ್ಟೆಂಬರ್ 20, 2021
24 °C

ಗೌರವಧನ ಹೆಚ್ಚಿಸಲು ಪಂಚಾಯಿತಿ ಜನಪ್ರತಿನಿಧಿಗಳ ಒಕ್ಕೂಟ ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಅನುದಾನ ಮತ್ತು ಗೌರವಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ರಾಜ್ಯ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರ ಹಾಗೂ ಸದಸ್ಯರ ಒಕ್ಕೂಟ ಒತ್ತಾಯಿಸಿದೆ.

‘ಜಿಲ್ಲಾ ಪಂಚಾಯಿತಿಗಳಿಗೆ ಆರ್ಥಿಕ ಮತ್ತು ಆಡಳಿತಾತ್ಮಕವಾಗಿ ಹೆಚ್ಚಿನ ಸವಲತ್ತನ್ನು ಕಲ್ಪಿಸಿ, ತಾಲ್ಲೂಕು ಪಂಚಾಯಿತಿಗಳನ್ನು ಕಡೆಗಣನೆ ಮಾಡಲಾಗಿದೆ’ ಎಂದು ಒಕ್ಕೂಟದ ಅಧ್ಯಕ್ಷ ನೀಲಕಂಠಪ್ಪ ಎಂ.ಕುಸಗೂರ ಆರೋಪಿಸಿದರು.

’ಕ್ಷೇತ್ರ ಸಂಚಾರಕ್ಕೆ ಪ್ರತ್ಯೇಕ ವಾಹನ ಕಲ್ಪಿಸಬೇಕು. ಶುದ್ಧ ಕುಡಿಯುವ ನೀರಿನ ಘಟಕಗಳ ದುರಸ್ತಿಗೆ ತರಬೇತಿ ಪಡೆದ ಸಿಬ್ಬಂದಿ ವ್ಯವಸ್ಥೆ ಮಾಡಬೇಕು. ತುರ್ತು ಸಂದರ್ಭದಲ್ಲಿ ಬಳಕೆ ಮಾಡಲು ₹5 ಲಕ್ಷ ಅನುದಾನ ಮಂಜೂರು ಮಾಡಬೇಕು’ ಎಂದು ವಿವರಿಸಿದರು.

‘ಜಿಲ್ಲೆಗೊಂದು ಕುಂದುಕೊರತೆ ನಿವಾರಣೆ ಪ್ರಾಧಿಕಾರ ರಚಿಸಬೇಕು. ಎಸ್‌ಸಿಪಿ, ಟಿಎಸ್‌ಪಿ ಯೋಜನೆಗಳು ದುರುಪಯೋಗವಾಗುತ್ತಿವೆ. ಶಾಲೆಗಳ ಮತ್ತು ಅಂಗನವಾಡಿ, ಶೌಚಾಲಯಗಳ ಅವ್ಯವಸ್ಥೆ ಸರಿಪಡಿಸಬೇಕು. ಈ ಬೇಡಿಕೆಗಳನ್ನು ಈಡೇರಿಸದಿದ್ದರೆ ಹೋರಾಟ ಮಾಡಲಾಗುವುದು’ ಎಂದರು.

‘ಖಾಲಿ ಹುದ್ದೆಗಳನ್ನು ಭರ್ತಿ ಮಾಡಬೇಕು ಮತ್ತು ತಾಲ್ಲೂಕು ಯೋಜನೆ ಹಾಗೂ ಅಭಿವೃದ್ಧಿ ಸಮಿತಿಗಳನ್ನು ಕಾರ್ಯಗತಗೊಳಿಸಬೇಕು’ ಎಂದು ಕೋರಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು