ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಂಚಮಸಾಲಿ ಮೀಸಲಾತಿ: ಸಮಿತಿಗೆ ತಡೆ

Last Updated 18 ಆಗಸ್ಟ್ 2022, 22:10 IST
ಅಕ್ಷರ ಗಾತ್ರ

ಬೆಂಗಳೂರು: 'ಲಿಂಗಾಯತ ಪಂಚಮಸಾಲಿ ಉಪ ಪಂಗಡವನ್ನು 2-ಎಗೆ ಸೇರ್ಪಡೆ ಮಾಡುವ ವಿಷಯದಲ್ಲಿ ಮುಂದಿನ ಆದೇಶದವರೆಗೆ ಮುಂದುವರಿಯಬಾರದು' ಎಂದು ನಿವೃತ್ತ ನ್ಯಾಯಮೂರ್ತಿ ಸುಭಾಷ್ ಬಿ. ಆಡಿ ನೇತೃತ್ವದ ಸಮಿತಿಗೆ ಹೈಕೋರ್ಟ್ ನಿರ್ದೇಶಿಸಿದೆ.

ಈ ಸಂಬಂಧ 'ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ'ದ ಪ್ರಧಾನ ಕಾರ್ಯದರ್ಶಿ ವೆಂಕಟರಾಮಯ್ಯ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದನ್ಯಾಯಮೂರ್ತಿ ಬಿ. ವೀರಪ್ಪ ನೇತೃತ್ವದ ವಿಭಾಗೀಯ ನ್ಯಾಯಪೀಠ ಪೀಠ ಈ ಕುರಿತಂತೆ ಇತ್ತೀಚೆಗೆಆದೇಶಿಸಿದೆ.

ಅರ್ಜಿಯಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವನ್ನೂ ಪ್ರತಿವಾದಿಯನ್ನಾಗಿ ಸೇರ್ಪಡೆ ಮಾಡಲು ಅರ್ಜಿದಾರರರಿಗೆ ನಿರ್ದೇಶಿಸಲಾಗಿದ್ದು ಇದೇ 24ಕ್ಕೆ ವಿಚಾರಣೆ ಮುಂದೂಡಲಾಗಿದೆ.

'ಸಮಿತಿ ರಚಿಸಿರುವ ರಾಜ್ಯ ಸರ್ಕಾರದ ಕ್ರಮ ಕಾನೂನು ಬಾಹಿರ' ಎಂಬುದು ಅರ್ಜಿದಾರರ ಆಕ್ಷೇಪ.

ಪಂಚಮಸಾಲಿ ಉಪ ಪಂಗಡವನ್ನು 3-ಬಿ ವಿಭಾಗದಿಂದ 2-ಎ ವ್ಯಾಪ್ತಿಗೆ ಸೇರ್ಪಡೆ ಮಾಡಬೇಕೆಂಬ ಬೇಡಿಕೆ ಪರಿಶೀಲಿಸಿ ವರದಿ ಸಲ್ಲಿಸಲು ನ್ಯಾಯಮೂರ್ತಿ ಸುಭಾಷ್ ಆಡಿ ನೇತೃತ್ವದ ಸಮಿತಿ ರಚಿಸಿ ರಾಜ್ಯ ಸರ್ಕಾರ 2021ರ ಜುಲೈ 1ರಂದು ಆದೇಶಿಸಿತ್ತು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT