ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಾಚಾರ್ಯ ಸ್ವಾಮೀಜಿ ವಿರುದ್ಧ ಹೇಳಿಕೆ: ಜಾಗತಿಕ ಲಿಂಗಾಯತ ಮಹಾಸಭಾ ಖಂಡನೆ

Published 18 ನವೆಂಬರ್ 2023, 14:13 IST
Last Updated 18 ನವೆಂಬರ್ 2023, 14:13 IST
ಅಕ್ಷರ ಗಾತ್ರ

ಬೆಂಗಳೂರು: ‘ಸಾಣೇಹಳ್ಳಿ ಮಠದ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿಕೆಯನ್ನು ಕೆಲವರು ತಪ್ಪಾಗಿ ಅರ್ಥೈಸಿಕೊಂಡು ಬಸವತತ್ವ ಮತ್ತು ಸ್ವಾಮೀಜಿ ಅವರ ವಿರುದ್ಧ ಉಪದ್ವ್ಯಾಪಿ ಹೇಳಿಕೆ ನೀಡುತ್ತಿರುವುದು ಸರಿಯಲ್ಲ’ ಎಂದು ಜಾಗತಿಕ ಲಿಂಗಾಯತ ಮಹಾಸಭಾ ಬೆಂಗಳೂರು ಜಿಲ್ಲಾ ಘಟಕ ಖಂಡಿಸಿದೆ.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷ ವೀರಭದ್ರಯ್ಯ, ‘ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಬಸವ ಅನುಯಾಯಿಗಳಿಗೆ, ಲಿಂಗಾಯತ ಧರ್ಮದವರಿಗೆ ಅರಿವು ಮೂಡಿಸಲು ವಚನ ಸಾಹಿತ್ಯದ ಆಶೋತ್ತರಗಳನ್ನು ಪಾಲಿಸಲು ತಿಳಿಸಿದರು. ಮನೆಗಳಲ್ಲಿ ಗಣಪತಿಯನ್ನು ವಿಘ್ನ ನಿವಾರಕನನ್ನಾಗಿ ಪೂಜಿಸುವುದು, ಪ್ರಾರ್ಥನೆ ಸಲ್ಲಿಸುವುದು ನಮ್ಮ ಸಂಸ್ಕೃತಿಯಲ್ಲ. ಅದರ ಬದಲು ವಾಸ್ತವಕ್ಕೆ ತಕ್ಕುದಾದ ವಚನಗಳನ್ನು ಪಠಿಸಬೇಕೆಂದು ಕರೆ ನೀಡಿದ್ದರು. ಆದರೆ, ಲಿಂಗಾಯತ ಧರ್ಮದ ಅರಿವಿಲ್ಲದ ಕೆಲವರು ಸ್ವಾಮೀಜಿ ಹೇಳಿಕೆ ತಿರುಚಿ ಜನಸಾಮಾನ್ಯರಲ್ಲಿ ಗೊಂದಲ ಸೃಷ್ಟಿಸಿ ಸ್ವಾಮೀಜಿ ಘನತೆಗೆ ಧಕ್ಕೆ ತರುತ್ತಿದ್ದಾರೆ’ ಎಂದು ದೂರಿದರು.

‘ಧರ್ಮ–ಧರ್ಮಗಳ ಮಧ್ಯೆ ವೈಷಮ್ಯ ಉಂಟಾಗುವ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಸಾಂವಿಧಾನಿಕ ಹಕ್ಕಾಗಿರುವ ಧರ್ಮ ಪ್ರಚಾರದಲ್ಲಿ ಸ್ವಾಮೀಜಿಗೆ ಅಡಚಣೆ ಮಾಡುವ ಮೂಲಕ ಲಿಂಗಾಯತರಿಗೆ ಹಾಗೂ ಬಸವತತ್ವದ ಅನುಯಾಯಿಗಳ ಮನಸ್ಸಿಗೆ ಘಾಸಿಗೊಳಿಸಿದ್ದು, ಸರ್ಕಾರ ಕೂಡಲೇ ಇವರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.

‘ಬಸವತತ್ವದ ಮೇಲೆ ಮುಂದುವರೆದ ದಾಳಿಯನ್ನು ವಿರೋಧಿಸಿ ಇದೇ 22ರಂದು ಕರ್ನಾಟಕ ಪ್ರಜ್ಞಾವಂತರ ಅನುಭವ ಮಂಟಪ ವೇದಿಕೆಯಿಂದ ಗಾಂಧಿ ಭವನದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ’ ಎಂದು ಮಾಹಿತಿ ನೀಡಿದರು.

ಮಹಾಸಭಾದ ಪ್ರಧಾನ ಕಾರ್ಯದರ್ಶಿ ಶಂಕರಪ್ಪ, ಸಂಚಾಲಕ ಶಿವಕುಮಾರ್ ಸ್ವಾಮಿ ಸಿ.ಎಸ್., ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT