ಶುಕ್ರವಾರ, ಅಕ್ಟೋಬರ್ 23, 2020
21 °C

ಬೆಂಗಳೂರು ನಗರದ ಗೋಡೆಗಳ ಮೇಲೆ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಯುಳ್ಳ ಭಿತ್ತಿಪತ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಅಧಿವೇಶನ ಆರಂಭವಾಗುತ್ತಿರುವ ಬೆನ್ನಲ್ಲೆ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಯುಳ್ಳ ಭಿತ್ರಿಪತ್ರಗಳನ್ನು ನಗರದ ಹಲವೆಡೆ ಗೋಡೆಗಳ ಮೇಲೆ ಅಂಟಿಸಲಾಗಿದೆ.

ಮೇಖ್ರಿ ವೃತ್ತ, ಅರಮನೆ ರಸ್ತೆ, ಶಂಕರ ಮಠ, ಕಾಮಾಕ್ಷಿಪಾಳ್ಯ ಹಾಗೂ ಸುತ್ತಮುತ್ತ ಸ್ಥಳಗಳಲ್ಲಿ ಸೋಮವಾರ ಭಿತ್ತಿಪತ್ರಗಳು ಕಂಡವು. ಆದರೆ, ಈ ಭಿತ್ತಿಪತ್ರಗಳನ್ನು ಅಂಟಿಸಿದ್ದು ಯಾರು ಎಂಬುದು ಗೊತ್ತಾಗಿಲ್ಲ.

₹2000 ಕೋಟಿ ಲೂಟಿ ಮಾಡಿರುವ ಸೋಂಕಿತ ಸರ್ಕಾರ ಹಾಗೂ ಹಣದಿಂದ ಹಣಕ್ಕಾಗಿ ಹಣಕ್ಕೋಸ್ಕರ ಅಧಿಕಾರ ಬಂದ ಸೋಂಕಿತ ಸರ್ಕಾರ ಸೇರಿದಂತೆ ಹಲವು ಘೋಷಣೆಗಳು ಭಿತ್ತಿಪತ್ರದಲ್ಲಿ ಇವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು