ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಘನತ್ಯಾಜ್ಯ ಸಂಸ್ಕರಣೆ ಅಧ್ಯಯನ: ಫ್ರಾನ್ಸ್‌ಗೆ ತೆರಳಿದ ‍ಪರಮೇಶ್ವರ್‌

Last Updated 28 ನವೆಂಬರ್ 2018, 4:16 IST
ಅಕ್ಷರ ಗಾತ್ರ

ಬೆಂಗಳೂರು: ಉಪಮುಖ್ಯಮಂತ್ರಿ ಹಾಗೂ ನಗರಾಭಿವೃದ್ಧಿ ಸಚಿವರಾದ ಡಾ.ಜಿ. ಪರಮೇಶ್ವರ್‌ ಅವರು ಫ್ರಾನ್ಸ್‌ ದೇಶದಲ್ಲಿನ ಘನ ತ್ಯಾಜ್ಯ ಸಂಸ್ಕರಣಾ ವಿಧಾನದ ಕುರಿತು ಅಧ್ಯಯನ ನಡೆಸಲು ನ.28 ರಿಂದ ಡಿ. 3 ರವರೆಗೆ ಫ್ರಾನ್ಸ್‌ಗೆ ತೆರಳಿದ್ದಾರೆ.

ಬಿಬಿಎಂಪಿ ಆಯುಕ್ತ ಮಂಜುನಾಥ್‌‌ ಪ್ರಸಾದ್ ಹಾಗೂ ಅಪರ ಮುಖ್ಯಕಾರ್ಯದರ್ಶಿ ಮಹೇಂದ್ರ ಜೈನ್‌ ಅವರೊಂದಿಗೆ ಈ ಅಧ್ಯಯನ ಪ್ರವಾಸಕ್ಕೆ ತೆರಳಲಿದ್ದಾರೆ.

ಫ್ರಾನ್ಸ್‌ ದೇಶದ ಮಹಾನಗರಗಳಲ್ಲಿ ಉತ್ಪತ್ತಿಯಾಗುವ ಘನತ್ಯಾಜ್ಯಗಳನ್ನು ಸಂಸ್ಕರಣೆ ಮಾಡುವ ವಿಧಾನ ಉತ್ತಮವಾಗಿದ್ದು, ಅವರ ಮಾದರಿಯನ್ನು ಅಧ್ಯಯನ ಮಾಡಲಿದ್ದಾರೆ.

ಒಟ್ಟು 6ದಿನಗಳ ಪ್ರವಾಸ ಇದಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT