ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಭೇಟಿ ನೀಡಿದ್ದ ವೇಳೆ ಪ್ರಯಾಣದ ಮಾರ್ಗದಲ್ಲಿ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿರುವ ಸಂಬಂಧ ಸ್ಥಳೀಯ ಪೊಲೀಸರು ತನಿಖೆ ಮಾಡುತ್ತಿದ್ದಾರೆ. ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ನಡೆಸುವ ತನಿಖೆಗೂ ರಾಜ್ಯ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪ್ರಧಾನಿ ಸಂಚರಿಸಬೇಕಿದ್ದ ಮಾರ್ಗದಲ್ಲಿ ಜಿಲೆಟಿನ್ ಕಡ್ಡಿಗಳು ಸೇರಿದಂತೆ ಏನೆಲ್ಲಾ ಸಿಕ್ಕಿದೆಯೋ ಆ ಬಗ್ಗೆ ತನಿಖೆ ಮಾಡಲಾಗುತ್ತಿದೆ’ ಎಂದು ಹೇಳಿದರು.

‘ಬೆಂಗಳೂರಿನಲ್ಲಿ ನಿಗದಿಯಾಗಿದ್ದ ಪ್ರಧಾನಿ ಕಾರ್ಯಕ್ರಮದ ಸ್ಥಳದಲ್ಲಿ ಬಾಂಬ್ ಸ್ಫೋಟಿಸುವುದಾಗಿ ಕರೆ ಮಾಡಿ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಪೊಲೀಸರು ಈಗಾಗಲೇ ಬಂಧಿಸಿ ತನಿಖೆ ಮಾಡುತ್ತಿದ್ದಾರೆ’ ಸ್ಪಷ್ಟಪಡಿಸಿದರು.

‘ಪ್ರಧಾನಿ ಕಾರ್ಯಕ್ರಮಕ್ಕೆ ಹೆಚ್ಚಿನ ಭದ್ರತೆ ಇರುತ್ತದೆ. ರಾಷ್ಟ್ರೀಯ ಸಂಸ್ಥೆಗಳು ಹಾಗೂ ರಾಜ್ಯ ಸರ್ಕಾರ ಜಂಟಿಯಾಗಿ ಹೊಣೆಗಾರಿಕೆ ನಿಭಾಯಿಸಿ, ಹೆಚ್ಚಿನ ಭದ್ರತೆ ಒದಗಿಸುತ್ತವೆ. ರಾಜ್ಯ ಸರ್ಕಾರಕ್ಕೂ ಸೂಚನೆ ಬಂದಿರುತ್ತದೆ. ಇದನ್ನು ಆಧರಿಸಿ ಭದ್ರತೆ ನೀಡಿರುತ್ತೇವೆ. ಪ್ರಧಾನಿ ಬೆಂಗಳೂರಿನ ಕಾರ್ಯಕ್ರಮಕ್ಕೆ ಬರುವ 2 ತಾಸು ಮುಂಚೆಯೇ ಪೊಲೀಸ್ ಸಿಬ್ಬಂದಿ ಜಿಲೆಟಿನ್ ಕಡ್ಡಿಗಳನ್ನು ಪತ್ತೆ ಹಚ್ಚಿದ್ದಾರೆ. ಇದು ಒಳ್ಳೆಯ ಕೆಲಸ. ಭಯೋತ್ಪಾದನೆಗೂ ಈ ಪ್ರಕರಣಕ್ಕೂ ನಂಟು ಇರುವ ವಿಚಾರ ಕುರಿತು ಈಗಲೇ ಏನನ್ನೂ ಹೇಳಲು ಆಗುವುದಿಲ್ಲ. ತನಿಖೆ ಆಗಲಿ ನೋಡೋಣ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.